
ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಬುಧವಾರ ಬೆಳಗ್ಗೆಯಿಂದ ಆರಂಭವಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇ.41.17 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆ 7 ಗಂಟೆಗೆ ಕಾಶ್ಮೀರ ಕಣಿವೆಯ 16 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಯಿತು.
ಚುನಾವಣಾ ಅಧಿಕಾರಿಗಳ ಪ್ರಕಾರ, ಪಹಲ್ಗಾಮ್‌ನಲ್ಲಿ ಶೇಕಡಾ 47.68 ಗರಿಷ್ಠ ಮತದಾನ ದಾಖಲಾಗಿದೆ. ಅದರ ನಂತರ ಡಿ ಹೆಚ್ ಪೋರಾದಲ್ಲಿ ಶೇಕಡಾ 43.66 ರಷ್ಟು, ದೂರುನಲ್ಲಿ ಶೇಕಡಾ 41.30 ಮತ್ತು ಕೊಕರ್ನಾಗ್(ಎಸ್ಟಿ)ನಲ್ಲಿ ಶೇಕಡಾ 41 ರಷ್ಟು. ಮತದಾನವಾಗಿದೆ.
ಟ್ರಾಲ್‌ನಲ್ಲಿ ಅತ್ಯಂತ ಕಡಿಮೆ ಅಂದರೆ ಶೇ. 26.75 ರಷ್ಟು ಮತದಾನ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟಾರೆಯಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ, ಜಮ್ಮು ಪ್ರದೇಶದ ಇಂದರ್ವಾಲ್ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇಕಡಾ 60.01 ರಷ್ಟು ಮತದಾನ ದಾಖಲಿಸಿದೆ.
370ನೇ ವಿಧಿ ರದ್ದುಪಡಿಸಿದ ನಂತರ ಕಣಿವೆಯಲ್ಲಿ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ಕೇಂದ್ರಾಡಳಿತ ಪ್ರದೇಶದ ಏಳು ಜಿಲ್ಲೆಗಳಲ್ಲಿ ಹರಡಿರುವ 24 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
Advertisement