ಕೋಲ್ಕತ್ತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂಬ ಆರೋಪವನ್ನು ಬೆಂಬಲಿಸುವ ಯಾವುದೇ ಪುರಾವೆಗಳು ಇಲ್ಲಿಯವರೆಗೂ ಸಿಕ್ಕಿಲ್ಲ ಎಂದು ಕೇಂದ್ರೀಯ ತನಿಖಾ ದಳ (CBI) ಕೋಲ್ಕತ್ತಾದ ಸೀಲ್ಡಾದ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ. ಆದರೆ ತನಿಖೆ ಪ್ರಗತಿಯಲ್ಲಿದೆ ಎಂದು ಸಿಬಿಐ ಹೇಳಿದೆ.
ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ತಾಲಾ ಪೊಲೀಸ್ ಠಾಣೆಯ ಮಾಜಿ ಅಧಿಕಾರಿ ಅಭಿಜೀತ್ ಮಂಡಲ್ ಅವರ ಬಂಧನ ಅವಧಿಯನ್ನು ವಿಸ್ತರಿಸುವಂತೆ ಸಿಬಿಐ ಒತ್ತಾಯಿಸಿದೆ. ಎಲ್ಲಾ ಸಾಧ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಸಾಕ್ಷ್ಯ ನಾಶ ಪ್ರಕರಣದ ತನಿಖೆಯನ್ನು ತಂಡವು ನಡೆಸುವಂತಾಗಲು ಸಿಬಿಐ ಕಸ್ಟಡಿ ಅವಧಿಯನ್ನು ವಿಸ್ತರಿಸಬೇಕೆಂಬ ಆಗ್ರಹ ಕೇಳಿಬಂದಿದೆ. ಆರೋಪಿಗಳಿಬ್ಬರೂ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಯಲ್ಲಿದ್ದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಅವರ ರಿಮಾಂಡ್ ಅವಧಿಯನ್ನು ಸೆಪ್ಟೆಂಬರ್ 20ರವರೆಗೆ ವಿಸ್ತರಿಸಲಾಗಿದೆ.
ಮಂಗಳವಾರ ನಡೆದ ವಿಚಾರಣೆಯಲ್ಲಿ, ಸಂದೀಪ್ ಘೋಷ್ ಮತ್ತು ಅಭಿಜಿತ್ ಮಂಡಲ್ ಅವರು ಕರೆ ರೆಕಾರ್ಡಿಂಗ್‌ಗಳು, ಡಿವಿಆರ್, ಸಿಸಿಟಿವಿ ಕ್ಯಾಮೆರಾಗಳು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಇತರ ಡೇಟಾಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಬೇಕಾಗಿದೆ. ಈ ಪ್ರಕರಣದಲ್ಲಿ ಕಸ್ಟಡಿ ವಿಚಾರಣೆ ಅಗತ್ಯವಿದೆ ಎಂದು ಹೇಳಿದರು. ಸಿಬಿಐ ವಕೀಲರು ವಿಚಾರಣೆ ವೇಳೆ ಇಬ್ಬರೂ ಸಹಕರಿಸುತ್ತಿಲ್ಲ. ಹೀಗಾಗಿ ಮೂರು ದಿನಗಳ ಸಿಬಿಐ ಕಸ್ಟಡಿಗೆ ಒತ್ತಾಯಿಸಿದರು. ಆದರೆ, ಈ ಪ್ರಕರಣದ ವಿಚಾರಣೆ ಪ್ರಾರಂಭವಾಗುವ ಮೊದಲು, ಸಂದೀಪ್ ಘೋಷ್ ಮತ್ತು ಅಭಿಜಿತ್ ಮಂಡಲ್‌ಗೆ ಜಾಮೀನು ನೀಡದಂತೆ ಸೀಲ್ದಾ ಬಾರ್‌ನ ವಕೀಲರು ನ್ಯಾಯಾಧೀಶರಿಗೆ ಮನವಿ ಮಾಡಿದರು.
Advertisement