ಒಂದು ರಾಷ್ಟ್ರ, ಒಂದು ಚುನಾವಣೆ' ಕಾರ್ಯಸಾಧುವಲ್ಲ; ಗಮನ ಬೇರೆಡೆ ಸೆಳೆಯಲು ಬಿಜೆಪಿ ಯತ್ನ: ಖರ್ಗೆ

ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಹೇಳಿಕೆ ನೀಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on

ನವದೆಹಲಿ: 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಾಯೋಗಿಕವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ. ಚುನಾವಣೆ ಸಮೀಪಿಸುತ್ತಿರುವಾಗ ನೈಜ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಬಿಜೆಪಿ ಇಂತಹ ವಿಷಯ ಮುಂದಿಡುತ್ತಿದೆ ಎಂದು ಆರೋಪಿಸಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಹೇಳಿಕೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಮಾರ್ಚ್‌ನಲ್ಲಿ ವರದಿ ಸಲ್ಲಿಸಿತ್ತು.

ಮಲ್ಲಿಕಾರ್ಜುನ ಖರ್ಗೆ
'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ!

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ಇದು ಪ್ರಾಯೋಗಿಕವಾಗಿಲ್ಲ. ಇದು ಕಾರ್ಯ ಸಾಧುವಲ್ಲ. ಚುನಾವಣೆಗಳು ಬಂದಾಗ, ಬಿಜೆಪಿಯವರು ಪ್ರಸ್ತಾಪಿಸಲು ಯಾವುದೇ ವಿಚಾರಗಳಿಲ್ಲದಿದ್ದರೆ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುತ್ತಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com