
ನವದೆಹಲಿ: ಆಗಾಗ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸುವ ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಸಭೆ ಸಂಸದ ಸುಬ್ರಮಣಿಯನ್ ಸ್ವಾಮಿ ಗುರುವಾರ ಮತ್ತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ವಿರುದ್ಧ ಕಿಡಿಕಾರಿದ್ದಾರೆ.
ಭಾರತ- ಚೀನಾ ಗಡಿ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿಕೆ ನೀಡುತ್ತಿದ್ದು, ದೇಶದ್ರೋಹಕ್ಕೆ ಗುರಿಯಾಗುತ್ತಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸುಬ್ರಮಣಿಯನ್ ಸ್ವಾಮಿ, 2020 ಏಪ್ರಿಲ್ ನಿಂದ ಚೀನಾ 4,046 ಚದರ ಕಿಲೋ ಮೀಟರ್ ವಿವಾದಿತ ಲಾಡಾಖ್ ಪ್ರದೇಶವನ್ನು ವಶಕ್ಕೆ ಪಡೆದಿದೆ ಎಂಬ ಸತ್ಯಾಂಶ ಹೊರಬಿದ್ದರೆ ದೇಶದ್ರೋಹಕ್ಕೆ ಗುರಿಯಾಗುತ್ತಾರೆ ಎಂಬುದು ಪ್ರಧಾನಿ ಮೋದಿ ಮತ್ತು ಅಮಿತ್ ಶಾಗೆ ಗೊತ್ತಿದೆ ಆದರೆ, ಈ ಜೋಡಿ ಸುಳ್ಳನ್ನೇ ಹೇಳಿಕೊಂಡು ಬಂದಿದೆ ಎಂದು ಅವರು ಆರೋಪಿಸಿದ್ದಾರೆ.
Advertisement