'ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯಾ?': ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶರ ವಿರುದ್ಧ ಸುಪ್ರೀಂ ಕೋರ್ಟ್ ಗರಂ; ವರದಿ ನೀಡುವಂತೆ ಸೂಚನೆ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಸೂರ್ಯಕಾಂತ್ ಹಾಗೂ ಹೃಷಿಕೇಶ್ ರಾಯ್ ನೇತೃತ್ವದ ಪೀಠ, ಈ ಸಂಬಂಧ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಂದ ವರದಿ ಕೇಳಿದೆ.
Supreme Court
ಸುಪ್ರೀಂಕೋರ್ಟ್
Updated on

ಬೆಂಗಳೂರು: ನಗರದಲ್ಲಿ ಮುಸ್ಲಿಮರು ಹೆಚ್ಚಿರುವ ಪ್ರದೇಶಕ್ಕೆ ಪಾಕಿಸ್ತಾನ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳ ವಿರುದ್ಧ ಸುಪ್ರೀಂ ಕೋರ್ಟ್ ಕೆಂಡಾಮಂಡಲಗೊಂಡಿದ್ದು, ಈ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಂದ ವರದಿ ಕೇಳಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಸೂರ್ಯಕಾಂತ್ ಹಾಗೂ ಹೃಷಿಕೇಶ್ ರಾಯ್ ನೇತೃತ್ವದ ಪೀಠ, ಈ ಸಂಬಂಧ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಂದ ವರದಿ ಕೇಳಿದೆ.

ಇತ್ತೀಚೆಗೆ ಕರ್ನಾಟಕ ಹೈಕೋರ್ಟ್‌ನ ವಿಚಾರಣೆಯ ವೇಳೆ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು, ಕೆಆರ್‌ ಮಾರುಕಟ್ಟೆಯ ಆಟೋ ಚಾಲಕರ ಟ್ರಾಫಿಕ್‌ ನಿಯಮ ಉಲ್ಲಂಘಿಸಿದ ಬಗ್ಗೆ ಮಾತನಾಡುತ್ತಾ ಗೋರಿಪಾಳ್ಯ ಪ್ರದೇಶವನ್ನು ಪಾಕಿಸ್ತಾನ ಎಂದು ಉಲ್ಲೇಖ ಮಾಡಿದ್ದರು.

ಮೈಸೂರು ರಸ್ತೆಯ ಮೇಲ್ಸೇತುವೆಗೆ ಹೋಗಿ, ಪ್ರತಿ ಆಟೋ ರಿಕ್ಷಾದಲ್ಲಿ 10 ಜನರು ಇರುತ್ತಾರೆ. ಇದು ಅನ್ವಯಿಸುವುದಿಲ್ಲ. ಏಕೆಂದರೆ ಗೋರಿ ಪಾಳ್ಯದಿಂದ ಮಾರುಕಟ್ಟೆಯವರೆಗಿನ ಮೈಸೂರು ರಸ್ತೆಯ ಮೇಲ್ಸೇತುವೆ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ಇರಿಸಿದರೂ ಅಷ್ಟೇ...ಎಂದು ಹೇಳಿದ್ದರು. ಮತ್ತೊಂದು ವೀಡಿಯೊದಲ್ಲಿ ಮಹಿಳಾ ವಕೀಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವುದೂ ಕೂಡ ಕಂಡು ಬಂದಿದೆ.

ಪ್ರತಿವಾದಿ ವಕೀಲರೊಬ್ಬರಿಗೆ ಪ್ರಶ್ನೆ ಕೇಳುತ್ತಿದ್ದಾಗ ಮಧ್ಯಪ್ರವೇಶಿಸಿದ ಮಹಿಳಾ ವಕೀಲರೊಬ್ಬರನ್ನು ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರ ಬಗ್ಗೆ (ಎದುರು ಪಕ್ಷ) ನಿಮಗೆ ಪೂರ್ತಿ ಗೊತ್ತಿದೆ! ನಾಳೆ ಬೆಳಿಗ್ಗೆ ಕೇಳಿದರೆ ಇನ್ನೇನಾದರೂ ಹೇಳುತ್ತೀರಿ. ಯಾವ ಬಣ್ಣದ ಒಳ ಉಡುಪು ಧರಿಸಿದ್ದಾರೆ ಎಂದೂ ಹೇಳುತ್ತೀರಿ ಎಂದು ವಕೀಲೆಯನ್ನು ಉದ್ದೇಶಿಸಿ ತಮಾಷೆ ಮಾಡಿದ್ದರು. ನ್ಯಾಯಾಧೀಶರ ಈ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದು, ಟೀಕೆಗಳು ವ್ಯಕ್ತವಾಗುತ್ತಿವೆ.

Supreme Court
'ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯಾ?': ನ್ಯಾಯಾಧೀಶರ ಪ್ರಶ್ನೆ

ಈ ಬೆಳವಣಿಗೆ ಬೆನ್ನಲ್ಲೇ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠವು, ನ್ಯಾಯಾಧೀಶರು ನ್ಯಾಯಾಲಯದಲ್ಲಿ ತಮ್ಮ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಸಾಮಾಜಿಕ ಮಾಧ್ಯಮದ ದಿನಗಳಲ್ಲಿ ನ್ಯಾಯಾಂಗದ ವ್ಯಾಖ್ಯಾನವು ನ್ಯಾಯಾಲಯದಿಂದ ಹೊರ ಹೋದಾಗ ಯಾವೆಲ್ಲಾ ರೀತಿಗಳಲ್ಲಿ ಬದಲಾವಣೆಯಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗುವ ತುರ್ತು ಇದೆ ಎಂದು ಪೀಠ ಹೇಳಿದೆ. ಅಲ್ಲದೆ, ನ್ಯಾಯಶಧೀಶರ ಹೇಳಿಕೆ ಕುರಿತ ವಿಚಾರಣೆಯನ್ನು ಎರಡು ವಾರ ಕಾಲ ಮುಂದೂಡಿಕೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com