ಜಲ್ನಾ: ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಇಂದು ಶುಕ್ರವಾರ ಬೆಳಗ್ಗೆ ರಾಜ್ಯ ಸಾರಿಗೆ ಬಸ್ ಮತ್ತು ಖಾಸಗಿ ಟ್ರಕ್ ಮಧ್ಯೆ ಡಿಕ್ಕಿ ಹೊಡೆದು ಆರು ಜನರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಡಿಗೋದ್ರಿ-ಜಲನಾ ಮಾರ್ಗದ ಶಹಾಪುರ ಬಳಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ಬಸ್‌ನ ಗಾಜುಗಳನ್ನು ಒಡೆದು ಗಾಯಾಳುಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯ ಸಾರಿಗೆ ಬಸ್ ಗೆವ್ರಾಯ್‌ನಿಂದ ಜಲ್ನಾಗೆ ತೆರಳುತ್ತಿದ್ದಾಗ, ಕಿತ್ತಳೆ ಹಣ್ಣುಗಳನ್ನು ಹೊತ್ತ ಟ್ರಕ್ ಅಂಬಾಡ್‌ನಿಂದ ಬರುತ್ತಿತ್ತು. ಸ್ಥಳೀಯರ ಸಹಾಯದಿಂದ ಪೊಲೀಸರು ಗಾಯಾಳುಗಳನ್ನು ರಕ್ಷಿಸಿ ಅಂಬಾದ್ ಮತ್ತು ಜಲ್ನಾ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಅಪಘಾತಕ್ಕೆ ಕಾರಣ ಇತ್ಯಾದಿಗಳ ಬಗ್ಗೆ ತನಿಖೆ ನಡೆಯುತ್ತಿದೆ.
Advertisement