
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಚುನಾವಣಾ ಕರ್ತವ್ಯಕ್ಕಾಗಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಕನಿಷ್ಠ ಮೂವರು ಬಿಎಸ್‌ಎಫ್ ಯೋಧರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಚುನಾವಣಾ ಕರ್ತವ್ಯಕ್ಕಾಗಿ ಬಿಎಸ್‌ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಾಡಿಗೆ ಬಸ್ಸೊಂದು ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ವಾಟರ್‌ಹಾಲ್‌ನ ಬ್ರೆಲ್ ಬಳಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಪಘಾತದಲ್ಲಿ ಸುಮಾರು 12 ಯೋಧರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಮೂವರು ಸೈನಿಕರು ಚಿಕಿತ್ಸೆಫಲಕಾರಿಯಾಗದೆ ಆಸ್ಪತ್ರೆಯಲ್ಲಿಸಾವನ್ನಪ್ಪಿದ್ದಾರೆ. ಇತರರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
Advertisement