ನವದೆಹಲಿ: ದುರ್ಗಾ ಪೂಜೆಯ ಸಂದರ್ಭದಲ್ಲಿ ಭಾರತಕ್ಕೆ 3,000 ಟನ್ ಹಿಲ್ಸಾ ಮೀನುಗಳನ್ನು ರಫ್ತು ಮಾಡಲು ಬಾಂಗ್ಲಾದೇಶ ಅನುಮೋದಿಸಿದೆ ಎಂದು ವಾಣಿಜ್ಯ ಸಚಿವಾಲಯ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಡೈಲಿ ಸ್ಟಾರ್ ವರದಿ ಮಾಡಿದೆ.
ರಫ್ತು ಅನುಮತಿ ಪಡೆಯಲು ಸಚಿವಾಲಯದ ಸಂಬಂಧಿತ ವಿಭಾಗವನ್ನು ಸಂಪರ್ಕಿಸಲು ಅರ್ಜಿದಾರರಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ಹಿಂದೆ, ದೇಶೀಯ ಪೂರೈಕೆಯನ್ನು ಹೆಚ್ಚಿಸಲು ಈ ವರ್ಷ ಭಾರತಕ್ಕೆ ಹಿಲ್ಸಾ ಮೀನುಗಳನ್ನು ರಫ್ತು ಮಾಡದಂತೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ನಿರ್ಬಂಧ ವಿಧಿಸಿತ್ತು.
2023 ರಲ್ಲಿ, ದುರ್ಗಾ ಪೂಜೆಯ ಸಂದರ್ಭದಲ್ಲಿ ಭಾರತಕ್ಕೆ ತಲಾ 50 ಟನ್ ನಂತೆ ಒಟ್ಟು 4 ಸಾವಿರ ಟನ್ ಹಿಲ್ಸಾ ಮೀನು ರಫ್ತು ಮಾಡಲು 79 ಕಂಪನಿಗಳಿಗೆ ಅನುಮತಿ ನೀಡಲಾಗಿತ್ತು.
Advertisement