ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ: ಆಂಧ್ರ ಮಾಜಿ ಸಿಎಂ ಜಗನ್ ವಿರುದ್ಧ ದೂರು ದಾಖಲು

ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು.
ವೈಎಸ್ ಜಗನ್ ಮೋಹನ್ ರೆಡ್ಡಿ
ವೈಎಸ್ ಜಗನ್ ಮೋಹನ್ ರೆಡ್ಡಿPTI
Updated on

ಹೈದರಾಬಾದ್‌: ತಿರುಪತಿ ತಯಾರಿಕೆಯಲ್ಲಿ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇತರರ ವಿರುದ್ಧ ಹೈದರಾಬಾದ್‌ನಲ್ಲಿ ದೂರು ದಾಖಲಿಸಲಾಗಿದೆ.

ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಪಾವಿತ್ರ್ಯವನ್ನು "ದುರುದ್ದೇಶಪೂರಿತ ಕೃತ್ಯಗಳ" ಮೂಲಕ ಹಾಳು ಮಾಡಿದ ಮತ್ತು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಜಗನ್ ವಿರುದ್ಧ ವಕೀಲರೊಬ್ಬರು ದೂರು ನೀಡಿದ್ದಾರೆ.

ಲ್ಯಾಬ್ ವರದಿಯನ್ನು ಉಲ್ಲೇಖಿಸಿ ಸೈದಾಬಾದ್ ಪೊಲೀಸರಿಗೆ ದೂರು ನೀಡಿದ ವಕೀಲೆ ಕೆ ಕರುಣಾ ಸಾಗರ್ ಅವರು, ವರದಿ ನೋಡಿ ತಮಗೆ ಆಘಾತವಾಯಿತು ಎಂದು ಹೇಳಿದ್ದಾರೆ.

ವೈಎಸ್ ಜಗನ್ ಮೋಹನ್ ರೆಡ್ಡಿ
ಚಂದ್ರಬಾಬು ನಾಯ್ಡು ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸುತ್ತಿದ್ದಾರೆ: ಮಾಜಿ ಸಿಎಂ ಜಗನ್

ಐಪಿಸಿ ಸೆಕ್ಷನ್ 298 ಮತ್ತು 299 ರ ಅಡಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ತಂದಿರುವ ಮತ್ತು ಲಕ್ಷಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಜಗನ್ ಮೋಹನ್ ರೆಡ್ಡಿ ಮತ್ತು ಇತರರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರುಣಾ ಸಾಗರ್ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com