ಕಾಂಗ್ರೆಸ್ ಸರ್ಕಾರ ಸಾಲ ಪಡೆದು ಸೋನಿಯಾ ಗಾಂಧಿಗೆ ನೀಡಿದೆ: ಕಂಗನಾ

ಇಂದು ಶಿಮ್ಲಾದ ಹಳ್ಳಿಯೊಂದರಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ನಟಿ-ರಾಜಕಾರಣಿ, ರಾಜ್ಯ ಸರ್ಕಾರ "ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದರು.
ಕಂಗನಾ ರಣಾವತ್
ಕಂಗನಾ ರಣಾವತ್
Updated on

ಶಿಮ್ಲಾ: ಹಿಮಾಚಲ ಪ್ರದೇಶ ಸರ್ಕಾರ ಸಾಲ ಪಡೆದು ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೀಡಿ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ ಎಂದು ಭಾರತೀಯ ಜನತಾ ಪಕ್ಷದ ಸಂಸದೆ ಕಂಗನಾ ರಣಾವತ್ ಅವರು ಭಾನುವಾರ ಆರೋಪಿಸಿದ್ದಾರೆ.

ಇಂದು ಶಿಮ್ಲಾದ ಹಳ್ಳಿಯೊಂದರಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ನಟಿ-ರಾಜಕಾರಣಿ, ರಾಜ್ಯ ಸರ್ಕಾರ "ಭ್ರಷ್ಟಾಚಾರದಲ್ಲಿ ಮುಳುಗಿದೆ ಮತ್ತು ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರಗಳು ಆಯಾ ರಾಜ್ಯಗಳ ಬೊಕ್ಕಸವನ್ನು ಖಾಲಿ ಮಾಡುತ್ತಿವೆ ಎಂದು ಎಲ್ಲರಿಗೂ ತಿಳಿದಿದೆ" ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಚುನಾವಣೆಗೆ "ಇಷ್ಟು ಹಣ" ಹೇಗೆ ಖರ್ಚು ಮಾಡುತ್ತಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ ಬಾಲಿವುಡ್ ನಟಿ, ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಸಾಲ ಪಡೆದು ಸೋನಿಯಾ ಗಾಂಧಿಗೆ ನೀಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದರು.

ಕಂಗನಾ ರಣಾವತ್
ಉತ್ತರ ಪ್ರದೇಶ: ಬಿಜೆಪಿ ಸಂಸದೆ ಕಂಗನಾಗೆ ಕೋರ್ಟ್ ಸಮನ್ಸ್

"ಪ್ರಸ್ತುತ ಸರ್ಕಾರವನ್ನು ಬೇರುಸಹಿತ ಕಿತ್ತೊಗೆಯಲು ನಾನು ಜನರಿಗೆ ಮನವಿ ಮಾಡುತ್ತೇನೆ". ನಾವು ವಿಪತ್ತು ಪರಿಹಾರ ನಿಧಿಗೆ ಹಣ ನೀಡಿದರೆ ಅದು ಸಿಎಂ ಪರಿಹಾರ ನಿಧಿಗೆ ಹೋಗಬೇಕು. ಆದರೆ ಅದು ಸೋನಿಯಾ ಪರಿಹಾರ ನಿಧಿಗೆ ಹೋಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ” ಎಂದು ಕಂಗನಾ ರಣಾವತ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com