
ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಒಳ ನುಗ್ಗಲು ಯತ್ನಿಸಿದ 35 ವರ್ಷದ ಪಾಕಿಸ್ತಾನಿ ಒಳ ನುಸುಳುಕೋರನನ್ನು ಭಾರತೀಯ ಸೇನಾಪಡೆಗಳು ಭಾನುವಾರ ಬಂಧಿಸಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಜಾನೆ ಗಡಿಯಾಚೆಯಿಂದ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸಿದಾಗ ಒಳ ನುಸುಳುಕೋರನನ್ನು ಸೇನಾಪಡೆಗಳು ತಡೆದು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದ ಗಡಿಯೊಳಗೆ ನುಸುಳುವ ಪ್ರಯತ್ನದ ಹಿಂದಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ಬಂಧಿತ ನುಸುಳುಕೋರನನ್ನು ಸೇನೆಯು ವಿಚಾರಣೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.
Advertisement