ನವದೆಹಲಿ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ಅವರನ್ನು ನೇಮಕ ಮಾಡಲಾಗಿದೆ. ಉದಯ್ ಭಾನು ಚಿಬ್ ಅವರು ಪ್ರಸ್ತುತ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪ್ರದೇಶ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.
ಬಿ.ವಿ. ಶ್ರೀನಿವಾಸ್ ಇದುವರೆಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿದ್ದರು. ಅವರನ್ನು ಬದಲಾಯಿಸಲಾಗಿದ್ದು, ಕೂಡಲೇ ಜಾರಿಗೆ ಬರುವಂತೆ ಉದಯ್ ಭಾನು ಚಿಬ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಿಸಲಾಗಿದೆ.
ಬಿ.ವಿ.ಶ್ರೀನಿವಾಸ್ ಕೊಡುಗೆಗಳನ್ನು ಪಕ್ಷ ಶ್ಲಾಘಿಸುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement