ಅಮರಾವತಿ: ಖಾಸಗಿ ಬಸ್ ವೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಸೆಮಡೋಹ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಪರತವಾಡಿ ಧಾನಿ ಮಾರ್ಗದ ಬಸ್ ಮೇಲ್ಘಾಟ್‌ನ ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಸೇತುವೆ ಕೆಳಗೆ ಬಿದ್ದಿದೆ.
ಘಟನೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, 30 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಸೌರಭ್ ಕಟಿಯಾರ್ ಮಾಹಿತಿ ನೀಡಿದ್ದಾರೆ. ತೀವ್ರವಾಗಿ ಗಾಯಗೊಂಡ ಮೂವರನ್ನು ಸೆಮಡೋಹ್ ಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Advertisement