AAP ಶಾಸಕ ಅಮಾನತುಲ್ಲಾ ನ್ಯಾಯಾಂಗ ಬಂಧನ ವಿಸ್ತರಣೆ!

ಸೋಮವಾರ ಅವರ ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಖಾನ್ ಅವರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ತೀರ್ಪು ಪ್ರಕಟಿಸಿದರು.
AAP ಶಾಸಕ ಅಮಾನತುಲ್ಲಾ ಖಾನ್
AAP ಶಾಸಕ ಅಮಾನತುಲ್ಲಾ ಖಾನ್
Updated on

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಅಕ್ಟೋಬರ್ 7 ರವರೆಗೆ ವಿಸ್ತರಿಸಿದೆ.

ಸೋಮವಾರ ಅವರ ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಖಾನ್ ಅವರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ತೀರ್ಪು ಪ್ರಕಟಿಸಿದರು.

ದೆಹಲಿಯ ಓಖ್ಲಾದಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಜಾರಿ ನಿರ್ದೇಶನಾಲಯ (ಇಡಿ) ಸೆಪ್ಟೆಂಬರ್ 2 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಅವರನ್ನು ಬಂಧಿಸಿತ್ತು. ಈ ಹಂತದಲ್ಲಿ ಖಾನ್ ಅವರನ್ನು ಬಿಡುಗಡೆ ಮಾಡುವುದರಿಂದ ಸಾಕ್ಷಿಗಳನ್ನು ತಿರುಚಲು ಕಾರಣವಾಗಬಹುದು ಮತ್ತು ತನಿಖೆಗೆ ಅಡ್ಡಿಯಾಗಬಹುದು ಎಂದು ಇಡಿ ವಾದಿಸಿತು.

AAP ಶಾಸಕ ಅಮಾನತುಲ್ಲಾ ಖಾನ್
ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಯಿಂದ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಬಂಧನ

ಹುಡುಕಾಟದ ನಂತರ ವಿಚಾರಣೆಯ ಸಮಯದಲ್ಲಿ ಖಾನ್ "ತಪ್ಪಿಸಿಕೊಳ್ಳುತ್ತಿದ್ದರು. ಇದರಿಂದ ಅವರನ್ನು ಬಂಧಿಸಬೇಕಾಯಿತು. ಖಾನ್ ಅಧ್ಯಕ್ಷರಾಗಿರುವ ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಅಕ್ರಮ ಆಸ್ತಿಗಳ ಆರೋಪಗಳಿಗೆ ಸಂಬಂಧಿಸಿದ ಆರ್ಥಿಕ ದುರ್ಬಳಕೆ ಅಪರಾಧ ಕುರಿತು ಸಂಸ್ಥೆ ತನಿಖೆ ನಡೆಸುತ್ತಿದೆ ಎಂದು ಇಡಿ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com