ದೆಹಲಿ: ದೆಹಲಿಯಲ್ಲಿ ಒಂದೇ ವಾರದಲ್ಲಿ 3000 ಡೆಂಗ್ಯು ಪ್ರಕರಣಗಳು ವರದಿಯಾಗಿವೆ. ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಸೊಳ್ಳೆಯಿಂದ ಹರಡುವ ಸಾಂಕ್ರಾಮಿಕ ರೋಗ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಇಲ್ಲಿಯವರೆಗೆ ಮಲೇರಿಯಾ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ಈ ತಿಂಗಳವರೆಗೆ ದೆಹಲಿಯಲ್ಲಿ ಈಗಾಗಲೇ 363 ಮಲೇರಿಯಾ ಪ್ರಕರಣಗಳು ವರದಿಯಾಗಿದ್ದು, 2023ರ ಸೆಪ್ಟೆಂಬರ್ ತಿಂಗಳಲ್ಲಿ 294 ಪ್ರಕರಣಗಳು ವರದಿಯಾಗಿತ್ತು.
ಕಳೆದ ವರ್ಷ ಒಟ್ಟು 426 ಮಲೇರಿಯಾ ಪ್ರಕರಣಗಳು ವರದಿಯಾಗಿತ್ತು. ಹೆಚ್ಚಿನ ಸಂಖ್ಯೆಯ ಮಲೇರಿಯಾ ಪ್ರಕರಣಗಳು ಪಶ್ಚಿಮ ದೆಹಲಿ ವಲಯದಿಂದ ವರದಿಯಾಗಿವೆ. ಚಿಕೂನ್ ಗುನ್ಯಾಕ್ಕೆ ಸಂಬಂಧಿಸಿದಂತೆ ಇದುವರೆಗೆ 43 ಪ್ರಕರಣಗಳು ವರದಿಯಾಗಿವೆ. ಇದು ಕಳೆದ ವರ್ಷಕ್ಕಿಂತ ದ್ವಿಗುಣವಾಗಿದೆ. ಕಳೆದ ವರ್ಷ ಒಟ್ಟು 65 ವೈರಸ್ ಪ್ರಕರಣಗಳು ವರದಿಯಾಗಿತ್ತು. ಈ ವರ್ಷ ದಕ್ಷಿಣ ದೆಹಲಿ ವಲಯದಿಂದ ಅತಿ ಹೆಚ್ಚು ಚಿಕೂನ್‌ಗುನ್ಯಾ ಪ್ರಕರಣಗಳು ವರದಿಯಾಗಿವೆ.
ಕಳೆದ ವಾರ, ನಗರದಲ್ಲಿ ಏಳು ದಿನಗಳಲ್ಲಿ ಸುಮಾರು 250 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ ಎಂದು ಪಿಟಿಐ ವರದಿ ಮಾಡಿದೆ. ನಗರದಲ್ಲಿ ಇದುವರೆಗೆ ಒಟ್ಟು 1,229 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಲೋಕನಾಯಕ ಆಸ್ಪತ್ರೆಯಲ್ಲಿ ದಾಖಲಾದ 54 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
Advertisement