ಮುಂಬೈ: ಚೆನ್ನೈ ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 22 ವರ್ಷದ ಕಾನೂನು ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ರೈಲ್ವೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಭಾನುವಾರ ಕರ್ಜಾತ್- ಪುಣೆ ನಡುವೆ ಚೆನ್ನೈ ಎಕ್ಸ್ ಪ್ರೆಸ್ ರೈಲು ಚಲಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಎಸ್. ರಾಘವೇಂದ್ರ ಎಂದು ಗುರುತಿಸಲಾಗಿದೆ. ಈತ ಚಲಿಸುತ್ತಿದ್ದ ರೈಲಿನ ಬಾಗಿಲ ಬಳಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಘಟನೆಯನ್ನು ಬಾಲಕಿ ತನ್ನ ಅಜ್ಜಿಗೆ ತಿಳಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ಸಂಬಂಧ ರೈಲು ಸಿಬ್ಬಂದಿ ಮಾಹಿತಿ ನೀಡಿದ ಕೂಡಲೇ ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement