ಮೂರು ದಿನಗಳ ಅಮೆರಿಕಾ ಪ್ರವಾಸ ಮುಗಿಸಿ ದೆಹಲಿಗೆ ವಾಪಸಾದ ಪ್ರಧಾನಿ ಮೋದಿ

ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರ ತವರೂರಾದ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು.
ದೆಹಲಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ
ದೆಹಲಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ "ಯಶಸ್ವಿ" ಮತ್ತು 'ಗಮನಾರ್ಹ' ಅಮೆರಿಕ ಪ್ರವಾಸ ಮುಗಿಸಿ ಮಂಗಳವಾರ ಸಂಜೆ ದೆಹಲಿಗೆ ಆಗಮಿಸಿದ್ದಾರೆ.

ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರ ತವರೂರಾದ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ವಿಶ್ವಸಂಸ್ಥೆಯ 'ಭವಿಷ್ಯದ ಶೃಂಗಸಭೆ'ಯಲ್ಲಿ ಭಾಗವಹಿಸಿದ್ದರು ಮತ್ತು ಹಲವಾರು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು.

ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದರು. ಅಲ್ಲದೆ ಅಮೆರಿಕದಲ್ಲಿ ಸಿಖ್‌ ಸಮುದಾಯದ ಹಲವಾರು ಸದಸ್ಯರನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ.

ದೆಹಲಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ
ಮಾನವೀಯತೆಯ ಯಶಸ್ಸು ಯುದ್ಧಭೂಮಿಯಲ್ಲಿಲ್ಲ: ಪ್ರಧಾನಿ ಮೋದಿ

ಇನ್ನು ಅಮೆರಿಕ ಭೇಟಿಯ ನೆನಪುಗಳನ್ನು ಎಕ್ಸ್ ನಲ್ಲಿ ಹಂಚಿಕೊಂಡಿರುವ ಮೋದಿ, ಈ ಭೇಟಿ "ಫಲದಾಯಕ", ವೈವಿಧ್ಯಮಯ ಕಾರ್ಯಕ್ರಮಗಳನ್ನು ಒಳಗೊಂಡಿದೆ ಮತ್ತು ಗ್ರಹವನ್ನು ಉತ್ತಮಗೊಳಿಸುವ ಗುರಿ ಹೊಂದಿರುವ ವಿಷಯಗಳ ಸರಣಿಯ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 21ರಂದು ವಿಲ್ಮಿಂಗ್ಟನ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆ ಸೇರಿದಂತೆ ಹಲವು ನಾಯಕರೊಂದಿಗೆ ನಡೆದ ದ್ವಿಪಕ್ಷೀಯ ಸಭೆಗಳ ಸಂಕ್ಷಿಪ್ತ ವಿಡಿಯೋವನ್ನು ಪ್ರಧಾನಿ ಹಂಚಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com