
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ಪ್ರತ್ಯೇಕ ಘಟನೆಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ ಮುರ್ಬಾದ್ ತಾಲೂಕಿನ ಶಿರಗಾಂವ್ ಮತ್ತು ಕಲ್ಯಾಣ್ ಬಳಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕಲ್ಯಾಣ್ ತಾಲೂಕಿನ ಕಂಬದಲ್ಲಿ ಸಿಡಿಲು ಬಡಿದು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಪುರುಷ ಮತ್ತು ಮಹಿಳೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿಯ ಅಧಿಕಾರಿ ತಿಳಿಸಿದ್ದಾರೆ.
ಇನ್ನು ಶಿರಗಾಂವ್‌ನಲ್ಲಿ ಸಿಡಿಲು ಬಡಿದು ಪರಶು ಪವಾರ್(42) ಎಂಬುವವರು ಮೃತಪಟ್ಟಿದ್ದಾರೆ.
ಈ ಸಂಬಂಧ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement