
ಬಿಜಾಪುರ: ನಕ್ಸಲರು ಅಡಗಿಸಿಟ್ಟಿದ್ದ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಗೊಂಡು ಐವರು ಭದ್ರತಾ ಸಿಬ್ಬಂದಿಗಳಿಗೆ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ವಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಚಿಂಗೆಲೂರು ಸಿಆರ್‌ಪಿಎಫ್ ಶಿಬಿರದಿಂದ ಭದ್ರತಾ ಸಿಬ್ಬಂದಿಯ ತಂಡವೊಂದು ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಿಆರ್‌ಪಿಎಫ್ ಶಿಬಿರದಿಂದ ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಐಇಡಿ ಸ್ಪೋಟಗೊಂಡಿದೆ.
ಐಇಡಿಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸಲು ನಡೆಸಿದ ಮೈನಿಂಗ್ ಕಾರ್ಯಾಚರಣೆಯಲ್ಲಿ, ಭದ್ರತಾ ಸಿಬ್ಬಂದಿಯೊಬ್ಬರ ಕಾಲಿಗೆ ಐಇಡಿ ಸಂಪರ್ಕ ಹೊಂದಿದ ತಂತಿ ತಗುಲಿದ ಪರಿಣಾಮ ಸ್ಫೋಟ ಸಂಭವಿಸಿದೆ. ಪರಿಣಾಮ ಭದ್ರತಾ ಸಿಬ್ಬಂದಿಗಳಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
Advertisement