ಕರ್ನಾಟಕ, ಹಿಮಾಚಲ ಪ್ರದೇಶದಲ್ಲಿ ರಾಹುಲ್ ಗಾಂಧಿ ಗ್ಯಾರಂಟಿಗಳು ವಿಫಲವಾಗಿದೆ: ಅಮಿತ್ ಶಾ

ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ. ಆದರೆ ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ರಾಹುಲ್ ಗಾಂಧಿ ಅವರ ಭರವಸೆಗಳು ವಿಫಲವಾಗಿವೆ ಎಂದು ಶಾ ಹೇಳಿದರು.
ಅಮಿತ್ ಶಾ
ಅಮಿತ್ ಶಾPTI
Updated on

ಚಂಡೀಗಢ: ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಂತಹ ರಾಜ್ಯಗಳಲ್ಲಿ ರಾಹುಲ್ ಗಾಂಧಿ ಅವರ ಚುನಾವಣಾ ಖಾತರಿಗಳು ವಿಫಲವಾಗಿವೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹರಿಯಾಣದಲ್ಲಿ ಕಾಂಗ್ರೆಸ್ ವಿರುದ್ಧ ಭಾನುವಾರ ವಾಗ್ದಾಳಿ ಮುಂದುವರೆಸಿದ್ದಾರೆ.

ಗುರುಗ್ರಾಮ್‌ನ ಬಾದ್‌ಶಹಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ. ಆದರೆ ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ರಾಹುಲ್ ಗಾಂಧಿ ಅವರ ಭರವಸೆಗಳು ವಿಫಲವಾಗಿವೆ ಎಂದು ಶಾ ಹೇಳಿದರು.

ಮತ್ತೊಂದೆಡೆ, ಬಿಜೆಪಿ ಯಾವುದೇ ಭರವಸೆ ನೀಡುವುದಿಲ್ಲ, ಆದರೆ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ ಎಂದರು. "ರಾಹುಲ್ ಬಾಬಾ ಮತ್ತು ಕಂಪನಿಯು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ" ಮತ್ತು ಕೇವಲ 'ಡಬಲ್ ಎಂಜಿನ್' ಸರ್ಕಾರವು ಹರಿಯಾಣದ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ ಎಂದು ಅವರು ಹೇಳಿದರು. "ನಾವು ದೇಶದ ಗಡಿಗಳನ್ನು ಸುರಕ್ಷಿತವಾಗಿರಿಸುತ್ತೇವೆ, ಮೀಸಲಾತಿಗಳನ್ನು ರಕ್ಷಿಸುತ್ತೇವೆ. 370ನೇ ವಿಧಿಯನ್ನು ಹಿಂತಿರುಗಿಸಲು ಎಂದಿಗೂ ಸಾಧ್ಯವಿಲ್ಲ ಎಂದು ಶಾ ಹೇಳಿದರು.

ಅಮಿತ್ ಶಾ
ಹರಿಯಾಣದಲ್ಲಿ ದಶಕದ ನೋವನ್ನು ಕಾಂಗ್ರೆಸ್ ಸರ್ಕಾರ ಕೊನೆಗೊಳಿಸಲಿದೆ: ರಾಹುಲ್ ಗಾಂಧಿ

ರ್ಯಾಲಿ ವೇಳೆ ವಕ್ಫ್ ಮಸೂದೆ ಬಗ್ಗೆ ಉಲ್ಲೇಖಿಸಿದ ಶಾ, "ವಕ್ಫ್ ಮಂಡಳಿಯಲ್ಲಿ ಈಗಿರುವ ಶಾಸನದಿಂದ ನಿಮಗೆ ಸಮಸ್ಯೆ ಇದೆ... ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ನಾವು ಅದನ್ನು ತಿದ್ದುಪಡಿ ಮಾಡುತ್ತೇವೆ" ಎಂದು ಹೇಳಿದರು. ಕಳೆದ ತಿಂಗಳು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆಯು ಸಮಾಜದಲ್ಲಿ ಒಡಕು ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಹಲವು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದರು ಮತ್ತು ಅದನ್ನು ಬಲವಾಗಿ ವಿರೋಧಿಸುವುದಾಗಿ ಹೇಳಿದ್ದರು ಎಂದು ಶಾ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com