ಉತ್ತರ ಪ್ರದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದ್ದು, ಬಿಜೆಪಿ ಆಡಳಿತ ಕೊನೆಯಾಗುತ್ತೆ: SP ಶಾಸಕ ಮೆಹಬೂಬ್ ಅಲಿ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಹೆಚ್ಚಳದ ಬಗ್ಗೆ ಮಾತನಾಡುತ್ತಾ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. 2027ರಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವುದಾಗಿ ಶಾಸಕರು ಹೇಳಿಕೊಂಡಿದ್ದರು.
ಮೆಹಬೂಬ್ ಅಲಿ
ಮೆಹಬೂಬ್ ಅಲಿ
Updated on

ಅಮ್ರೋಹಾ(ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾಗಿದ್ದು, ಬಿಜೆಪಿ ಆಡಳಿತ ಕೊನೆಯಾಗುತ್ತೇ ಎಂದು ಹೇಳುವ ಮೂಲಕ ರಾಜಕೀಯ ಗದ್ದಲಕ್ಕೆ ಕಾರಣವಾಗಿದ್ದು ಅಮ್ರೋಹಾದ ಸಮಾಜವಾದಿ ಪಕ್ಷದ ಶಾಸಕ ಮೆಹಬೂಬ್ ಅಲಿಗೆ ಇದೀಗ ಸಂಕಷ್ಟ ಶುರುವಾಗಿದೆ.

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಹೆಚ್ಚಳದ ಬಗ್ಗೆ ಮಾತನಾಡುತ್ತಾ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. 2027ರಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವುದಾಗಿ ಶಾಸಕರು ಹೇಳಿಕೊಂಡಿದ್ದರು. ಈ ಕಾರ್ಯಕ್ರಮದ ವಿಡಿಯೋ ಹೊರಬಿದ್ದ ಬಳಿಕ ಕೋಲಾಹಲ ಸೃಷ್ಟಿಯಾಗಿತ್ತು. ಇದೀಗ ಪೊಲೀಸರು ಈತನ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಮೆಹಬೂಬ್ ಅಲಿ ಹಾಗೂ ಶೇಖ್ ಜಾಕಿರ್ ಹುಸೇನ್ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಮಾಜವಾದಿ ಪಿಡಿಎ ಬ್ಯಾನರ್ ಅಡಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಸ್ಲಿಂ ಜನಸಂಖ್ಯೆಯ ಆಧಾರದ ಮೇಲೆ ಬಿಜೆಪಿ ಮತ್ತು ಯೋಗಿ ಸರ್ಕಾರವನ್ನು ಸೋಲಿಸುವ ಬಗ್ಗೆ ಮಾತನಾಡಿದರು. ಈ ವೇಳೆ ಬಿಜೆಪಿಯನ್ನು ಗುರಿಯಾಗಿಸಿಕೊಂಡಿದ್ದ ಮೆಹಬೂಬ್ ಅಲಿ ಸಂವಿಧಾನ ವಿರೋಧಿ ಮನಸ್ಥಿತಿ ಎಂದೂ ಹೇಳಿದ್ದಾರೆ. ಇದರೊಂದಿಗೆ ಮೋದಿ ಸರ್ಕಾರ ಎಲ್ಲವನ್ನೂ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದರು. ಈಗಿನ ಸರ್ಕಾರ ರೈಲ್ವೆ, ದೂರವಾಣಿ, ಎಲ್‌ಐಸಿ, ವಿಮಾನ ನಿಲ್ದಾಣ ಎಲ್ಲವನ್ನೂ ಮಾರಾಟ ಮಾಡಿದೆ ಎಂದು ಶಾಸಕರು ಹೇಳಿದರು. ದೇಶದ ಜನತೆ ಅವರನ್ನು ಅರ್ಥ ಮಾಡಿಕೊಂಡಿದ್ದು, ಈಗ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಮೆಹಬೂಬ್ ಅಲಿ
ಹಿಮಾಚಲ ಪ್ರದೇಶ: ರಾಜ್ಯದಲ್ಲಿ 'ಯೋಗಿ ಮಾಡಲ್' ಅಳವಡಿಸಲು ಮುಂದಾದ ಕಾಂಗ್ರೆಸ್ ಸಚಿವನಿಗೆ ಹೈಕಮಾಂಡ್ ಎಚ್ಚರಿಕೆ!

ಮೆಹಬೂಬ್ ಅಲಿ 2002ರಲ್ಲಿ ಖಾಂತ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾದರು. ಇದರ ನಂತರ, ಅವರು 2007ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಗೆದ್ದರು. ಅಲ್ಲದೆ 2012 ಮತ್ತು 2017ರ ವಿಧಾನಸಭೆ ಚುನಾವಣೆಯಲ್ಲೂ ಗೆಲುವು ಸಾಧಿಸಿದ್ದರು. ರಾಜ್ಯದಲ್ಲಿ ಸಮಾಜವಾದಿ ಪಕ್ಷ ಅಧಿಕಾರದಲ್ಲಿದ್ದಾಗ ರೇಷ್ಮೆ ಮತ್ತು ಜವಳಿ ಸಚಿವರನ್ನಾಗಿ ಮಾಡಲಾಗಿತ್ತು. 2016ರಲ್ಲಿ ಸಣ್ಣ ನೀರಾವರಿ ಖಾತೆಯನ್ನೂ ಹೆಚ್ಚುವರಿಯಾಗಿ ವಹಿಸಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com