ಇದು 'ವಿಕಸಿತ ಭಾರತ' ಬಜೆಟ್; ಸಮಾಜದ ಪ್ರತಿಯೊಂದು ವರ್ಗದ, ಅಭಿವೃದ್ಧಿ ಹೊಂದಿದ ಭಾರತಕ್ಕೆ ಅಡಿಪಾಯ ಹಾಕುತ್ತದೆ: ಪ್ರಧಾನಿ ಮೋದಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಗುರುವಾರ ಲೋಕಸಭೆಯಲ್ಲಿ ಮಂಡಿಸಿದ 2024-25ನೇ ಸಾಲಿನ ಮಧ್ಯಂತರ ಬಜೆಟ್ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಗುರುವಾರ ಲೋಕಸಭೆಯಲ್ಲಿ ಮಂಡಿಸಿದ 2024-25ನೇ ಸಾಲಿನ ಮಧ್ಯಂತರ ಬಜೆಟ್ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಮಧ್ಯಂತರ ಬಜೆಟ್ ಮಂಡನೆ ನಂತರ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳ ಪ್ರತಿಬಿಂಬವನ್ನು ಹೊಂದಿದೆ. ಬಜೆಟ್‌ನಲ್ಲಿ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ, 1 ಲಕ್ಷ ಕೋಟಿ ರೂಪಾಯಿಗಳ ನಿಧಿಯನ್ನು ಘೋಷಿಸಲಾಗಿದೆ.

ಈ ಮಧ್ಯಂತರ ಬಜೆಟ್ ಅಂತರ್ಗತ ಮತ್ತು ನವೀನವಾಗಿದೆ. ಇದು ನಿರಂತರತೆಯ ವಿಶ್ವಾಸವನ್ನು ಹೊಂದಿದೆ. ಇದು ವಿಕಸಿತ ಭಾರತದ ಎಲ್ಲಾ 4 ಸ್ತಂಭಗಳನ್ನು ಸಶಕ್ತಗೊಳಿಸುತ್ತದೆ- ಯುವಜನತೆ, ಬಡವರು, ಮಹಿಳೆಯರು ಮತ್ತು ರೈತರಾಗಿದ್ದಾರೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಭರವಸೆಯನ್ನು ಈ ಬಜೆಟ್ ನೀಡುತ್ತದೆ ಎಂದರು.

ಈ ಬಜೆಟ್‌ನಲ್ಲಿ ವಿತ್ತೀಯ ಕೊರತೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಬಂಡವಾಳ ವೆಚ್ಚಕ್ಕೆ ಐತಿಹಾಸಿಕ ಗರಿಷ್ಠ 11,11,111 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಅರ್ಥಶಾಸ್ತ್ರಜ್ಞರ ಭಾಷೆಯಲ್ಲಿ ಮಾತನಾಡಿದರೆ, ಒಂದು ರೀತಿಯಲ್ಲಿ ಇದು 'ಸ್ವೀಟ್ ಸ್ಪಾಟ್'. ಇದರೊಂದಿಗೆ, 21ನೇ ಶತಮಾನದ ಭಾರತದ ಆಧುನಿಕ ಮೂಲಸೌಕರ್ಯ ನಿರ್ಮಾಣದೊಂದಿಗೆ ಯುವಜನತೆಗೆ ಹೊಸ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗುವುದು ಎಂದರು.

ಈ ಬಜೆಟ್ ಬಡವರು ಮತ್ತು ಮಧ್ಯಮ ವರ್ಗದವರ ಸಬಲೀಕರಣ ಮತ್ತು ಅವರಿಗೆ ಹೊಸ ಉದ್ಯೋಗಾವಕಾಶಗಳ ಸೃಷ್ಟಿಗೆ ಒತ್ತು ನೀಡುತ್ತದೆ. ಬಡವರಿಗೆ ಇನ್ನೂ 2 ಕೋಟಿ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಘೋಷಿಸಲಾಗಿದೆ. ನಾವು ಈಗ 3 ಕೋಟಿ 'ಲಖ್ಪತಿ ದೀದಿ ಯೋಜನೆ' ಹೊಂದುವ ಗುರಿ ಹೊಂದಿದ್ದೇವೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನವನ್ನು ಪಡೆಯುತ್ತಾರೆ ಎಂದು ತಮ್ಮ ಸರ್ಕಾರದ ಬಜೆಟ್ ಬಗ್ಗೆ ಮಾತನಾಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com