ಚಂಪೈ ಸೋರೆನ್
ಚಂಪೈ ಸೋರೆನ್

ಫೆಬ್ರವರಿ 5 ರಂದು ಜಾರ್ಖಂಡ್ ಸರ್ಕಾರದಿಂದ ವಿಶ್ವಾಸ ಮತ ಸಾಬೀತು

ಜಾರ್ಖಂಡ್‌ನಲ್ಲಿ ಚಂಪೈ ಸೋರೆನ್ ನೇತೃತ್ವದ ಸಮ್ಮಿಶ್ರ ಸರ್ಕಾರವು ಫೆಬ್ರವರಿ 5 ರಂದು ವಿಶ್ವಾಸ ಮತಯಾಚಿಸಲಿದೆ ಎಂದು ಸಚಿವ ಅಲಂಗೀರ್ ಆಲಂ ಅವರು ಶುಕ್ರವಾರ ನಡೆದ ಮೊದಲ ಸಂಪುಟ ಸಭೆಯ ನಂತರ ತಿಳಿಸಿದ್ದಾರೆ.

ರಾಂಚಿ: ಜಾರ್ಖಂಡ್‌ನಲ್ಲಿ ಚಂಪೈ ಸೋರೆನ್ ನೇತೃತ್ವದ ಸಮ್ಮಿಶ್ರ ಸರ್ಕಾರವು ಫೆಬ್ರವರಿ 5 ರಂದು ವಿಶ್ವಾಸ ಮತಯಾಚಿಸಲಿದೆ ಎಂದು ಸಚಿವ ಅಲಂಗೀರ್ ಆಲಂ ಅವರು ಶುಕ್ರವಾರ ನಡೆದ ಮೊದಲ ಸಂಪುಟ ಸಭೆಯ ನಂತರ ತಿಳಿಸಿದ್ದಾರೆ.

ಜೆಎಂಎಂ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೋರೆನ್ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ತಮ್ಮ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ನಡೆಸಿದರು.

"ರಾಜ್ಯದಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟದಿಂದ ಬಹುಮತ ಸಾಬೀತುಪಡಿಸಲು ಫೆಬ್ರುವರಿ 5 ರಂದು ಎರಡು ದಿನಗಳ ವಿಶೇಷ ವಿಧಾನಸಭೆ ಅಧಿವೇಶನ ಕರೆಯಲಾಗಿದೆ. ಮೊದಲ ದಿನವೇ ಸರ್ಕಾರ ವಿಶ್ವಾಸಮತ ಯಾಚಿಸಲಿದೆ" ಎಂದು ಆಲಂ ಪಿಟಿಐಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಚಂಪೈ ಸೋರೆನ್ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ನೂತನ ಸಿಎಂ ಸೋರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಅವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಅಲಂಗೀರ್ ಆಲಂ ಮತ್ತು ಆರ್‌ಜೆಡಿ ನಾಯಕ ಸತ್ಯಾನಂದ್ ಭೋಕ್ತಾ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Related Stories

No stories found.

Advertisement

X
Kannada Prabha
www.kannadaprabha.com