ಪ್ರಧಾನಿ ಮೋದಿ ದೈವಿಕ ಶಕ್ತಿಯ ಸಂಕೇತ: ಕಾಂಗ್ರೆಸ್ ನಾಯಕ

ಪ್ರಧಾನಿ ನರೇಂದ್ರ ಮೋದಿ ಅವರು ದೈವಿಕ ಶಕ್ತಿಯ ಸಂಕೇತ ಎಂದು ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಶುಕ್ರವಾರ ಹೇಳಿದ್ದಾರೆ.
ಆಚಾರ್ಯ ಪ್ರಮೋದ್ ಕೃಷ್ಣಂx - ಪ್ರಧಾನಿ ಮೋದಿ
ಆಚಾರ್ಯ ಪ್ರಮೋದ್ ಕೃಷ್ಣಂx - ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೈವಿಕ ಶಕ್ತಿಯ ಸಂಕೇತ ಎಂದು ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಚಾರ್ಯ ಪ್ರಮೋದ್ ಕೃಷ್ಣಂ ಅವರು, "ನಾನು ಪ್ರಧಾನಿ ಮೋದಿಯನ್ನು ಮೊದಲ ಬಾರಿಗೆ ಭೇಟಿ ಮಾಡಿದ್ದೇನೆ. ಪ್ರಧಾನಿಗೆ ಖಂಡಿತವಾಗಿಯೂ ದೈವಿಕ ಶಕ್ತಿಯ ಆಶೀರ್ವಾದವಿದೆ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಭೇಟಿಯಾದ ನಂತರ ನನಗೆ ಅನಿಸಿದ್ದನ್ನು ಹೇಳುತ್ತೇನೆ. ಅವರು ದೈವಿಕ ಶಕ್ತಿಯ ಸಂಕೇತ ಎಂದು ನಾನು ಹೇಳಬಲ್ಲೆ ಎಂದಿದ್ದಾರೆ.

"ನಾನು ಶ್ರೀ ಕಲ್ಕಿ ಧಾಮದ ಶಿಲಾನ್ಯಾಸ ಸಮಾರಂಭಕ್ಕೆ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಲು ಹೋಗಿದ್ದೆ. ಅವರನ್ನು ಭೇಟಿ ಮಾಡಿದ್ದಕ್ಕೆ ನನಗೆ ಸಂತೋಷವಾಗಿದೆ ಮತ್ತು ನನ್ನ ಆಹ್ವಾನವನ್ನು ಪ್ರಧಾನಿ ಮೋದಿ ಸ್ವೀಕರಿಸಿದ್ದಕ್ಕೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com