ದೇಶವನ್ನು ಒಡೆದ ಮೇಲೂ ನಿಮಗೆ ತೃಪ್ತಿ ಇಲ್ಲವೇ, ಇನ್ನೆಷ್ಟು ವಿಭಜಿಸುತ್ತೀರಿ?: ಡಿ.ಕೆ ಸುರೇಶ್ ಹೇಳಿಕೆಗೆ ಪ್ರಧಾನಿ ಮೋದಿ ಕಿಡಿ

ದೇಶವನ್ನು ಒಡೆದ ಮೇಲೂ ನಿಮಗೆ ತೃಪ್ತಿ ಇಲ್ಲವೇ? ಇನ್ನೆಷ್ಟು ವಿಭಜಿಸುತ್ತೀರಾ? ಎಂದು ಸಂಸದ ಡಿಕೆ ಸುರೇಶ್‌ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ದೇಶವನ್ನು ಒಡೆದ ಮೇಲೂ ನಿಮಗೆ ತೃಪ್ತಿ ಇಲ್ಲವೇ? ಇನ್ನೆಷ್ಟು ವಿಭಜಿಸುತ್ತೀರಾ? ಎಂದು ಸಂಸದ ಡಿಕೆ ಸುರೇಶ್‌ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಮೋದಿ, ದೇಶವನ್ನು ಈಗಾಗಲೇ ವಿಭಜನೆ ಮಾಡಿದ್ದೀರಿ. ಹಿಂದಿನಿಂದಲೂ ವಿಭಜನೆ ಮಾಡುತ್ತಲೇ ಆಡಳಿತ ನಡೆಸಿದ್ದೀರಿ. ಮುಂದೆ ದೇಶವನ್ನು ಇನ್ನೆಷ್ಟು ಭಾಗ ಮಾಡಲು ಹೊರಟಿದ್ದೀರಿ. ಒಬ್ಬ ಕಾಂಗ್ರೆಸ್ ಸಂಸದ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡುತ್ತಿದ್ದಾರೆ. ದೇಶವನ್ನು ಒಡೆದ ಮೇಲೂ ನಿಮಗೆ ತೃಪ್ತಿ ಇಲ್ಲವೇ? ಎಂದು ಪ್ರಧಾನಿ ಮೋದಿ ಪ್ರಶ್ನೆ ಮಾಡಿದರು.

ಜವಾಹರಲಾಲ್ ನೆಹರು ತಪ್ಪಿನಿಂದ ಕಾಶ್ಮೀರ ಸಮಸ್ಯೆ ಸೃಷ್ಟಿಯಾಯಿತು. ನೆಹರು ಹೊರಟು ಹೋದ್ರು, ಆದ್ರೆ ದೇಶ ನೋವು ಅನುಭವಿಸುತ್ತಿದೆ. ಇಂದು ನಾವು ಜಮ್ಮು-ಕಾಶ್ಮೀರ ಅಭಿವೃದ್ಧಿ ಮಾಡಿದ್ದೇವೆ ಎಂದು ಟಾಂಗ್ ಕೊಟ್ಟರು.

ಭಯೋತ್ಪಾದನೆ, ನಕ್ಸಲ್ ಆತಂಕ ಸೇರಿದಂತೆ ಯಾವುದೇ ದಾಳಿಯನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಭಾರತೀಯ ಸೇನೆ ಗಡಿಯಲ್ಲಿ ಸಶಕ್ತವಾಗಿ ಹೋರಾಡುತ್ತಿದೆ. ನಮ್ಮ ಸೇನೆಯ ಬಗ್ಗೆ ನಮಗೆ ಹೆಮ್ಮೆಯಾಗಬೇಕು. ರಾಜಕೀಯ ನಾಯಕರ ಚುಚ್ಚು ಮಾತಿನಿಂದ ಸೇನೆ ಆತ್ಮವಿಶ್ವಾಸ ಕುಗ್ಗಲಿದೆ, ಅನ್ನೋ ಭಾವನೆ ನಿಮ್ಮಲ್ಲಿ ನಿಮ್ಮ ಅಲೋಚನೆ ಬದಲಿಸಿ ಎಂದು ಮೋದಿ ಸಲಹೆ ನೀಡಿದ್ದಾರೆ.

ಕೇಂದ್ರ ಬಜೆಟ್‌ ಬಳಿಕ ಮಾತನಾಡಿದ್ದ ಡಿಕೆ ಸುರೇಶ್ ಅವರು, ದಕ್ಷಿಣ ಭಾರತದ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕವಾಗಿ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯಗಳ ಹಣ ನಮಗೇ ಹಂಚಿಕೆಯಾಗಬೇಕಾದರೆ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯವಾಗಿದೆ. ಹೀಗಾಗಿ, ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಬೇಕಾಗುತ್ತದೆ ಎಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com