ಹವಾಮಾನ ವರದಿ: ಫೆ.15 ವರೆಗೆ ಈ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಧ್ಯಭಾರತ, ಪೂರ್ವ ಭಾರತದ ಹಲವು ಪ್ರದೇಶಗಳಿಗೆ ಫೆ.13-15 ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. 
ಹವಾಮಾನ ವರದಿ (ಸಾಂಕೇತಿಕ ಚಿತ್ರ)
ಹವಾಮಾನ ವರದಿ (ಸಾಂಕೇತಿಕ ಚಿತ್ರ)

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಧ್ಯಭಾರತ, ಪೂರ್ವ ಭಾರತದ ಹಲವು ಪ್ರದೇಶಗಳಿಗೆ ಫೆ.13-15 ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. 

ಈ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ ಮಹಿಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಪೂರ್ವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಗಳಲ್ಲಿ ಫೆ.13-15 ವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಈ ಪ್ರದೇಶಗಳಲ್ಲಿನ ನಿವಾಸಿಗಳಿಗೆ ಫೆ.13-15 ದಿನಗಳಲ್ಲಿ ಸುರಕ್ಷಿತವಾಗಿರುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. 

ಫೆ.13-15 ರ ಅವಧಿಯಲ್ಲಿ ಕಾಂಕ್ರೀಟ್ ನೆಲದ ಮೇಲೆ ಮಲಗುವುದನ್ನು,  ಕಾಂಕ್ರೀಟ್ ಗೋಡೆಗಳಿಗೆ ಒರಗಿ ನಿಲ್ಲಬೇಡಿ ಎಂದು ಹವಾಮಾನ ಇಲಾಖೆ ಎಚ್ಚಕೆ ನೀಡಿದೆ. ಪೂರ್ವ ಮಧ್ಯಪ್ರದೇಶ, ಛತ್ತೀಸ್ ಗಢ, ಜಾರ್ಖಂಡ್, ವಿದರ್ಭ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಮ್ ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. 

ಪಂಜಾಬ್ ಮೇಲೆ ಚಂಡಮಾರುತದ ಪರಿಚಲನೆ ಫೆಬ್ರವರಿ 13 ರಂದು ಉತ್ತರಾಖಂಡ್ ಮತ್ತು ಪಂಜಾಬ್, ಹರಿಯಾಣ, ಪಶ್ಚಿಮ ರಾಜಸ್ಥಾನದಲ್ಲಿ ಮಳೆ ಅಥವಾ ಹಿಮಪಾತವನ್ನು ಉಂಟುಮಾಡುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಫೆಬ್ರವರಿ 17 ಮತ್ತು 18 ರಂದು ಪಶ್ಚಿಮದ ಅಡಚಣೆ ಮಳೆ ಅಥವಾ ಹಿಮಪಾತವನ್ನು ಉಂಟುಮಾಡುವ ಸಾಧ್ಯತೆಯಿದೆ. ಮುಂದಿನ ಕೆಲವು ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನವು 2-4 ° C ಮತ್ತು ಪೂರ್ವ ಭಾರತದ ಹಲವು ಭಾಗಗಳಲ್ಲಿ 2-3 ° C ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. 

ಮುಂದಿನ 5 ದಿನಗಳಲ್ಲಿ ಮಧ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆ ಕಂಡುಬರುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com