ಸಾಂದರ್ಭಿಕ ಚಿತ್ರ
ದೇಶ
ಕಳೆದ ವರ್ಷ ಜಮ್ಮು-ಕಾಶ್ಮೀರದಲ್ಲಿ 72 ಉಗ್ರರ ಹತ್ಯೆ
2023 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 72 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿರುವುದಾಗಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಅವರಲ್ಲಿ 50 ಮಂದಿ ವಿದೇಶಿ ಮೂಲದವರಾಗಿದ್ದಾರೆ ಎನ್ನಲಾಗಿದೆ.
ಶ್ರೀನಗರ: 2023 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 72 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿರುವುದಾಗಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಅವರಲ್ಲಿ 50 ಮಂದಿ ವಿದೇಶಿ ಮೂಲದವರಾಗಿದ್ದಾರೆ ಎನ್ನಲಾಗಿದೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಅಂಕಿಅಂಶಗಳ ಪ್ರಕಾರ, ಕೇಂದ್ರಾಡಳಿತ ಪ್ರದೇಶದಲ್ಲಿ ಇನ್ನೂ 91 ಉಗ್ರರು ಸಕ್ರಿಯರಾಗಿದ್ದಾರೆ. ಈ 91 ಮಂದಿಯಲ್ಲಿ 66 ವಿದೇಶಿ ಉಗ್ರರು ಮತ್ತು 25 ಮಂದಿ ಸ್ಥಳೀಯರು ಎಂದು ಅಂಕಿಅಂಶಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಕೈಗೊಳ್ಳಲು ವ್ಯಾಪಕವಾಗಿ ಸಿಆರ್ ಪಿಎಫ್ ನಿಯೋಜಿಸಲಾಗಿದೆ.
2022ರಲ್ಲಿ 187 ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದರು. ಈ ಪೈಕಿ 57 ವಿದೇಶಿ ಮೂಲದವರು ಹೆಚ್ಚಾಗಿ ಪಾಕಿಸ್ತಾನಕ್ಕೆ ಸೇರಿದವರಾಗಿದ್ದರೆ, 130 ಮಂದಿ ಸ್ಥಳೀಯರು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ