ದೆಹಲಿ ಅಬಕಾರಿ ನೀತಿ ಪ್ರಕರಣ: ಮೂರನೇ ಬಾರಿಯೂ ಇ.ಡಿ ವಿಚಾರಣೆಗೆ ಅರವಿಂದ ಕೇಜ್ರಿವಾಲ್ ಗೈರು

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇ.ಡಿ ನೀಡಿರುವ ಮೂರನೇ ಸಮನ್ಸ್‌ಗೆ ಲಿಖಿತ ಉತ್ತರ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿಚಾರಣೆಗೆ ಗೈರಾಗಿದ್ದು, ನೋಟಿಸ್ ಕಾನೂನುಬಾಹಿರ ಎಂದು ಹೇಳಿರುವುದಾಗಿ ಎಎಪಿ ಮೂಲಗಳು ತಿಳಿಸಿವೆ.
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇ.ಡಿ ನೀಡಿರುವ ಮೂರನೇ ಸಮನ್ಸ್‌ಗೆ ಲಿಖಿತ ಉತ್ತರ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿಚಾರಣೆಗೆ ಗೈರಾಗಿದ್ದು, ನೋಟಿಸ್ ಕಾನೂನುಬಾಹಿರ ಎಂದು ಹೇಳಿರುವುದಾಗಿ ಎಎಪಿ ಮೂಲಗಳು ತಿಳಿಸಿವೆ.

ತನಿಖಾ ಸಂಸ್ಥೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಲು ಕೇಜ್ರಿವಾಲ್ ಸಿದ್ಧರಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರತಿಪಾದಿಸಿದೆ. ಆದರೆ, ಅವರನ್ನು ಬಂಧಿಸಲು ಸಮನ್ಸ್ ಕಳುಹಿಸಲಾಗಿದೆ ಎಂದು ಹೇಳಿಕೊಂಡಿದೆ.

'ಲೋಕಸಭಾ ಚುನಾವಣೆಗೂ ಮುನ್ನವೇ ನೋಟಿಸ್ ಕಳುಹಿಸಿದ್ದು ಏಕೆ? ಕೇಜ್ರಿವಾಲ್ ಅವರನ್ನು ಚುನಾವಣಾ ಪ್ರಚಾರದಿಂದ ತಡೆಯುವ ಪ್ರಯತ್ನವೇ ಈ ನೋಟೀಸ್' ಎಂದು ಪಕ್ಷ ಆರೋಪಿಸಿದೆ.

ಅಬಕಾರಿ ನೀತಿಗೆ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಬುಧವಾರ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆದಿತ್ತು.

ನವೆಂಬರ್ 2 ಮತ್ತು ಡಿಸೆಂಬರ್ 21 ರಂದು ನೀಡಿದ್ದ ಎರಡು ಸಮನ್ಸ್‌ಗಳನ್ನು ಧಿಕ್ಕರಿಸಿದ್ದ ಅರವಿಂದ ಕೇಜ್ರಿವಾಲ್ ಅವರು ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗಿರಲಿಲ್ಲ. ಕೇಜ್ರಿವಾಲ್‌ಗೆ ಇದು ಮೂರನೇ ಇ.ಡಿ ನೋಟಿಸ್ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com