ಲೋಕಸಭೆ ಚುನಾವಣೆಗೆ ಪ್ರಚಾರ ಮಾಡದಂತೆ ತಡೆಯಲು ಕೇಜ್ರಿವಾಲ್ ಬಂಧನಕ್ಕೆ ಬಿಜೆಪಿ ಸಂಚು: ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸಂಚು ರೂಪಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಆರೋಪಿಸಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸಂಚು ರೂಪಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಆರೋಪಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಸಿಎಂಗೆ ಮೂರನೇ ಸಮನ್ಸ್‌ ಜಾರಿ ಮಾಡಿದೆ. ಆದರೆ ಇಂದು ಸಹ ಕೇಜ್ರಿವಾಲ್ ಅವರು ವಿಚಾರೆಗೆ ಗೈರುಹಾಜರಾಗಿದ್ದು, ತಮಗೆ ನೀಡಿರುವ ನೋಟಿಸ್ ಕಾನೂನು ಬಾಹಿರ ಎಂದು ಲಿಖಿತ ಉತ್ತರ ಕಳುಹಿಸಿದ್ದಾರೆ.

ಎಎಪಿ ನಾಯಕ ಮತ್ತು ದೆಹಲಿ ಕ್ಯಾಬಿನೆಟ್ ಸಚಿವೆ ಅತಿಶಿ ಅವರು, "ರಾಜಕೀಯ" ಸೇಡಿನಿಂದ ಸಮನ್ಸ್ ನೀಡಲಾಗಿದೆ. ಕೇಜ್ರಿವಾಲ್ ಅವರನ್ನು ಏಕೆ ವಿಚಾರಣೆಗೆ ಕರೆದಿದ್ದಾರೆ ಎಂಬುದರ ಕುರಿತು ಸ್ಪಷ್ಟತೆ ಕೋರಿ ಪದೇ ಪದೇ ಲಿಖಿತವಾಗಿ ಮನವಿ ಸಲ್ಲಿಸಿದರೂ ಇಡಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದಿದ್ದಾರೆ.

ತಮಗೆ ಯಾವ ಆಧಾರದಲ್ಲಿ ಸಮನ್ಸ್ ನೀಡಲಾಗಿದೆ ಎಂದು ತಿಳಿಸುವಂತೆ ಅರವಿಂದ್ ಕೇಜ್ರಿವಾಲ್ ಅವರು ಪದೇ ಪದೇ ಇಡಿಯನ್ನು ಕೇಳಿದ್ದಾರೆ. ಅಲ್ಲದೆ ವಿಚಾರಣೆಗೆ ಸಂಬಂಧಪಟ್ಟಂತೆ ಪ್ರಶ್ನಾವಳಿಯ ರೂಪದಲ್ಲಿ ನೋಟಿಸ್ ಕಳುಹಿಸಿ. ಅದಕ್ಕೆ ಸರಿಯಾಗಿ ಉತ್ತರಿಸಲಾಗುವುದು" ಎಂದು ಕೇಳಿರುವುದಾಗಿ ಅತಿಶಿ ಹೇಳಿದ್ದಾರೆ.

ಇಡಿ ಮತ್ತು ಸಿಬಿಐ ಅನ್ನು ಭಾರತೀಯ ಜನತಾ ಪಕ್ಷ, ವಿರೋಧ ಪಕ್ಷದ ನಾಯಕರ ಮೇಲೆ ದಾಳಿ ಮಾಡಲು ರಾಜಕೀಯ ಸಾಧನವಾಗಿ ಬಳಸಿಕೊಳ್ಳುತ್ತಿದೆ ಎಂದು ದೆಹಲಿ ಸಚಿವೆ ಆರೋಪಿಸಿದ್ದಾರೆ.

“ಬಿಜೆಪಿ ಅಬಕಾರಿ ನೀತಿ ಪ್ರಕರಣವನ್ನು ಇಡಿ ಮೂಲಕ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಮತ್ತು ಕೇಜ್ರಿವಾಲ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com