ರಾಮ ಮಂದಿರದಲ್ಲಿ ಸರ್ಕಾರದ ಸಕ್ರಿಯ ಭಾಗವಹಿಸುವಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆ

ರಾಮ ಮಂದಿರ ಉದ್ಘಾಟನೆಗೂ ಮುನ್ನ ದೇವಾಲಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಸರ್ಕಾರದ "ಸಕ್ರಿಯ ಭಾಗವಹಿಸುವಿಕೆ" ಬಗ್ಗೆ ಮುಸ್ಲಿಂ ಸಂಘಟನೆ ಜಮಿಯತ್ ಉಲೇಮಾ-ಎ-ಹಿಂದ್ ಶನಿವಾರ ತೀವ್ರ ಕಳವಳ ವ್ಯಕ್ತಪಡಿಸಿದೆ ಮತ್ತು...
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ನವದೆಹಲಿ: ರಾಮ ಮಂದಿರ ಉದ್ಘಾಟನೆಗೂ ಮುನ್ನ ದೇವಾಲಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಸರ್ಕಾರದ "ಸಕ್ರಿಯ ಭಾಗವಹಿಸುವಿಕೆ" ಬಗ್ಗೆ ಮುಸ್ಲಿಂ ಸಂಘಟನೆ ಜಮಿಯತ್ ಉಲೇಮಾ-ಎ-ಹಿಂದ್ ಶನಿವಾರ ತೀವ್ರ ಕಳವಳ ವ್ಯಕ್ತಪಡಿಸಿದೆ ಮತ್ತು ಕೇಂದ್ರ "ಪಕ್ಷಪಾತ ನೀತಿ" ಅಳವಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದೆ.
  
1991ರ ಪೂಜಾ ಸ್ಥಳಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕುರಿತು ಸುಪ್ರೀಂ ಕೋರ್ಟ್ ತನ್ನ ಅಯೋಧ್ಯೆಯ ತೀರ್ಪಿನಲ್ಲಿ ಭರವಸೆ ನೀಡಿದ್ದರೂ, ಇತರ ಮಸೀದಿಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಇನ್ನೂ ಹಲವಾರು ನ್ಯಾಯಾಲಯಗಳಲ್ಲಿ ಪರಿಗಣಿಸಲಾಗುತ್ತಿದೆ. ಇದು ನ್ಯಾಯಾಂಗದ ನ್ಯಾಯಸಮ್ಮತತೆಯ ಬಗ್ಗೆ ನಾಗರಿಕರ ವಿಶ್ವಾಸ ಕಳೆದುಕೊಳ್ಳುತ್ತದೆ ಎಂದು ಜಮಿಯತ್(ಮಹಮೂದ್ ಮದನಿ ಬಣ) ಹೇಳಿದೆ.

ಜಮೀಯತ್ ತನ್ನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಕ್ಫ್ ಆಸ್ತಿಗಳ ರಕ್ಷಣೆ, ಪೂಜಾ ಸ್ಥಳಗಳ ಕಾಯಿದೆ 1991 ರ ಜಾರಿ, ರಾಮ ಮಂದಿರದ ಘಟನೆಗಳು ಮತ್ತು ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಜಮಿಯತ್ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

ಈ ವಿಷಯಗಳ ಕುರಿತು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಯಿತು ಎಂದು ಜಮಿಯತ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com