ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿ ಕುರಿತು ಟ್ವೀಟ್; ಹೊಸ ವಿವಾದ ಮೈಮೇಲೆ ಎಳೆದುಕೊಂಡ ಮಾಲ್ಡೀವ್ಸ್ ಸಚಿವ

ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಲಕ್ಷದ್ವೀಪ ಭೇಟಿಯ ಕುರಿತು ಮಾಲ್ಡೀವ್ಸ್ ಸಚಿವರೊಬ್ಬರು ಇತ್ತೀಚೆಗೆ ಮಾಡಿದ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಗದ್ದಲ ಎಬ್ಬಿಸಿದೆ.
ಲಕ್ಷದ್ವೀಪದಲ್ಲಿ ಪ್ರಧಾನಿ ನರೇಂದ್ರ ಮೋದಿ
ಲಕ್ಷದ್ವೀಪದಲ್ಲಿ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಲಕ್ಷದ್ವೀಪ ಭೇಟಿಯ ಕುರಿತು ಮಾಲ್ಡೀವ್ಸ್ ಸಚಿವರೊಬ್ಬರು ಇತ್ತೀಚೆಗೆ ಮಾಡಿದ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಗದ್ದಲ ಎಬ್ಬಿಸಿದೆ.

ಈ ತಿಂಗಳ ಆರಂಭದಲ್ಲಿ, ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ದ್ವೀಪ ಪ್ರದೇಶದಲ್ಲಿ ಹಲವಾರು ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ಮೋದಿಯವರು ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿದ್ದರು.

ಇದರ ಬೆನ್ನಲ್ಲೇ ಮಾಲ್ಡೀವ್ಸ್ ಸಚಿವರು, ಭಾರತವು ಮಾಲ್ಡೀವ್ಸ್ ಅನ್ನು ಗುರಿಯಾಗಿಸಿಕೊಂಡಿದೆ ಎಂದು ಟ್ವೀಟ್ ಮಾಡಿದ್ದು, ಬೀಚ್ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಭಾರತವು ಮಾಲ್ಡೀವ್ಸ್‌ನೊಂದಿಗೆ ಸ್ಪರ್ಧಿಸಲು ಹಲವು ಸವಾಲುಗಳನ್ನು ಎದುರಿಸಲಿದೆ ಎಂದು ಹೇಳಿದ್ದಾರೆ.

ಲಕ್ಷದ್ವೀಪದಲ್ಲಿ ಬೀಚ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿಯವರು  ಇತ್ತೀಚೆಗೆ ಫೋಟೊಗಳನ್ನು ಹಂಚಿಕೊಂಡಿದ್ದರು ಮತ್ತು ತಮ್ಮಲ್ಲಿರುವ ಸಾಹಸಗಳನ್ನು ಅಪ್ಪಿಕೊಳ್ಳಲು ಬಯಸುವವರಿಗೆ, ಲಕ್ಷದ್ವೀಪವು ನಿಮ್ಮ ಮುಂದಿನ ಪಟ್ಟಿಯಲ್ಲಿರಬೇಕು. ನನ್ನ ವಾಸ್ತವ್ಯದ ಸಮಯದಲ್ಲಿ, ನಾನು ಸ್ನಾರ್ಕಲಿಂಗ್ ಅನ್ನು ಸಹ ಪ್ರಯತ್ನಿಸಿದೆ. ಇದು ಎಂತಹ ಆಹ್ಲಾದಕರ ಅನುಭವವಾಗಿದೆ! ಎಂದು ಪೋಸ್ಟ್ ಮಾಡಿದ್ದಾರೆ. 

ಮೋದಿಯವರು ಈ ಪೋಸ್ಟ್‌ ಮಾಡಿದ ನಂತರ ಮಾಲ್ಡೀವ್ಸ್ ಸಚಿವರು ಈ ರೀತಿಯ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ. 

ಲಕ್ಷದ್ವೀಪಕ್ಕೆ ತೆರಳಿದ್ದ ಮೋದಿ ಸ್ನಾರ್ಕಲಿಂಗ್ ಮಾಡಿದ್ದರು. ಈ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಭಾರತೀಯರು ಗೂಗಲ್‌ನಲ್ಲಿ ಲಕ್ಷದ್ವೀಪದ ಕುರಿತು ಸರ್ಚ್‌ ಮಾಡುವುದರವ್ವಿ ಭಾರಿ ಏರಿಕೆಯಾಗಿದೆ.

ಕಳೆದ ಕೆಲವು ತಿಂಗಳುಗಳಲ್ಲಿ, ಹೊಸ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಅಧಿಕಾರಕ್ಕೆ ಬಂದಾಗಿನಿಂದ, ಭಾರತ-ಮಾಲ್ಡೀವ್ಸ್ ಸಂಬಂಧಗಳು ಹದಗೆಟ್ಟಿವೆ.

ವಿವಿಧ ಮಾಧ್ಯಮ ವರದಿಗಳ ಪ್ರಕಾರ, ಅಧ್ಯಕ್ಷರು ತಮ್ಮ ಚುನಾವಣಾ ಪ್ರತಿಜ್ಞೆ ಸಂದರ್ಭದಲ್ಲಿ ಮಾಲ್ಡೀವ್ಸ್‌ನಲ್ಲಿರುವ ಭಾರತದ ಸಣ್ಣ ಮಿಲಿಟರಿ ತುಕಡಿಯನ್ನು ವಾಪಸ್ ಕಳುಹಿಸುವುದಾಗಿ ಮತ್ತು ದ್ವೀಪದ 'ಭಾರತ ಮೊದಲು' ನೀತಿಯನ್ನು ಬದಲಾಯಿಸುವುದಾಗಿ ಹೇಳಿದ್ದರು.

ಸದ್ಯ ಮಾಲ್ಡೀವ್ಸ್ ಚೀನಾ ಪರವಾಗಿ ವಾಲಿದ್ದು, ಅಲ್ಲಿದ್ದ ಭಾರತದ ಸಣ್ಣ ಮಿಲಿಟರಿ ತುಕಡಿಯನ್ನು ವಾಪಸ್ ಕಳುಹಿಸಲು ಮುಂದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com