ರಾಮಮಂದಿರ ಉದ್ಘಾಟನೆ ಮೂಲಕ ಬಿಜೆಪಿ ಗಿಮಿಕ್ ಶೋ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ಲೋಕಸಭೆ ಚುನಾವಣೆಗೆ ಮುನ್ನ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುವ ಮೂಲಕ ಬಿಜೆಪಿ ಗಿಮಿಕ್ ಶೋನಲ್ಲಿ ತೊಡಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. 
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಜಾಯ್‌ನಗರ: ಲೋಕಸಭೆ ಚುನಾವಣೆಗೆ ಮುನ್ನ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುವ ಮೂಲಕ ಬಿಜೆಪಿ ಗಿಮಿಕ್ ಶೋನಲ್ಲಿ ತೊಡಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ.

'ಇತರ ಸಮುದಾಯಗಳನ್ನು ಹೊರಗಿಡುವ ಉತ್ಸವಗಳನ್ನು ತಾನು ಬೆಂಬಲಿಸುವುದಿಲ್ಲ' ಎಂದು ಟಿಎಂಸಿ ವರಿಷ್ಠರು ಪ್ರತಿಪಾದಿಸಿದ್ದಾರೆ.

ದಕ್ಷಿಣ 24 ಪರಗಣ ಜಿಲ್ಲೆಯ ಜಾಯ್‌ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಧರ್ಮದ ಆಧಾರದ ಮೇಲೆ ಜನಸಾಮಾನ್ಯರನ್ನು ವಿಭಜಿಸುವುದರಲ್ಲಿ ನನಗೆ ನಂಬಿಕೆ ಇಲ್ಲ ಎಂದು ಹೇಳಿದರು.

'ಎಲ್ಲಾ ಸಮುದಾಯದ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಮತ್ತು ಒಗ್ಗಟ್ಟಿನ ಬಗ್ಗೆ ಮಾತನಾಡುವ ಉತ್ಸವಗಳನ್ನು ನಾನು ನಂಬುತ್ತೇನೆ. ಬಿಜೆಪಿ ಇದನ್ನು (ರಾಮಮಂದಿರ ಉದ್ಘಾಟನೆ) ನ್ಯಾಯಾಲಯದ ಸೂಚನೆಯ ಮೇರೆಗೆ ಮಾಡುತ್ತಿದೆ. ಆದರೆ, ಅದನ್ನು ಲೋಕಸಭೆ ಚುನಾವಣೆಗೆ ಮುನ್ನ ಗಿಮಿಕ್ ಶೋ ಮಾಡುತ್ತಿದೆ' ಎಂದು ಅವರು ಹೇಳಿದರು.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000 ಕ್ಕೂ ಹೆಚ್ಚು ಜನರು 'ಪ್ರಾಣ ಪ್ರತಿಷ್ಠಾಪನಾ' ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com