
ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 514 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,422ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಇಬ್ಬರು ಮತ್ತು ಕರ್ನಾಟಕದಲ್ಲಿ ಒಬ್ಬರು ಸೇರಿದಂತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮೂವರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
ದೈನಂದಿನ ಪ್ರಕರಣಗಳ ಸಂಖ್ಯೆಯು ಡಿಸೆಂಬರ್ 5, 2023 ರವರೆಗೆ ಎರಡಂಕಿಗಿಂತ ಕಳಗೆ ಇತ್ತು. ಆದರೆ ಕೋವಿಡ್ ರೂಪಾಂತರಿ JN.1 ಮತ್ತು ಶೀತ ಹವಾಮಾನದ ಪರಿಸ್ಥಿತಿಯಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.
ಒಟ್ಟು ಸಕ್ರಿಯ ಪ್ರಕರಣಗಳಲ್ಲಿ, ಶೇ. 92 ರಷ್ಟು ಸೋಂಕಿತರು ಮನೆಯಲ್ಲಿ ಕ್ವಾರಂಟೈನ್ ಆಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
"ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಪ್ರಕಾರ, JN.1 ರೂಪಾಂತರಿಯು ಹೊಸ ಪ್ರಕರಣಗಳ ಏರಿಕೆಗೆ ಕಾರಣವಾಗುತ್ತಿಲ್ಲ ಅಥವಾ ಆಸ್ಪತ್ರೆಗೆ ದಾಖಲಾತಿ ಮತ್ತು ಮರಣದ ಪ್ರಮಾಣದ ಹೆಚ್ಚಳಕ್ಕೆ ಕಾರಣವಾಗುವುದಿಲ್ಲ ಎಂದು ಸೂಚಿಸುತ್ತಿರುವುದಾಗಿ" ಎಂದು ಅಧಿಕೃತ ಮೂಲಗಳು ತಿಳಿಸಿವೆ.
Advertisement