ಸಂಕಷ್ಟದಲ್ಲಿ ‘ಅನ್ನಪೂರ್ಣಿ’ ಸಿನಿಮಾ: ನಟಿ ನಯನತಾರಾ, ಚಿತ್ರದ ಇತರರ ವಿರುದ್ಧ ಪ್ರತ್ಯೇಕ ದೂರು ದಾಖಲು

ಇತ್ತೀಚೆಗಷ್ಟೇ ಬಿಡುಗಡೆಯಾದ ಅನ್ನಪೂರ್ಣಿ ಸಿನಿಮಾಗೆ ಇದೀಗ ಸಂಕಷ್ಟ ಎದುರಾಗಿದೆ, ಚಿತ್ರದಲ್ಲಿನ ಕೆಲವು ದೃಶ್ಯಗಳು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿ ಎರಡು ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ನಟಿ ನಯನತಾರಾ ಮತ್ತು ಚಿತ್ರಕ್ಕೆ ಸಂಬಂಧಿಸಿದ ಇತರರ ವಿರುದ್ಧ ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ.
ಅನ್ನಪೂರ್ಣಿ ಚಿತ್ರದ ಸ್ಟಿಲ್
ಅನ್ನಪೂರ್ಣಿ ಚಿತ್ರದ ಸ್ಟಿಲ್
Updated on

ಮುಂಬೈ: ಇತ್ತೀಚೆಗಷ್ಟೇ ಬಿಡುಗಡೆಯಾದ ಅನ್ನಪೂರ್ಣಿ ಸಿನಿಮಾಗೆ ಇದೀಗ ಸಂಕಷ್ಟ ಎದುರಾಗಿದೆ, ಚಿತ್ರದಲ್ಲಿನ ಕೆಲವು ದೃಶ್ಯಗಳು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿ ಎರಡು ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ನಟಿ ನಯನತಾರಾ ಮತ್ತು ಚಿತ್ರಕ್ಕೆ ಸಂಬಂಧಿಸಿದ ಇತರರ ವಿರುದ್ಧ ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.

ಚಿತ್ರದಲ್ಲಿ ರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಲಾಗಿದ್ದು, ಲವ್ ಜಿಹಾದ್ ಅನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಲಾಗಿದೆ.

'ಅನ್ನಪೂರ್ಣಿ' ಸಿನಿಮಾ ಇತ್ತೀಚೆಗಷ್ಟೇ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

'ಬಜರಂಗದಳದ ಕಾರ್ಯಕರ್ತರು ಎರಡು ದಿನಗಳ ಹಿಂದೆ ಪಶ್ಚಿಮ ಉಪನಗರದಲ್ಲಿರುವ ಓಶಿವಾರಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಈ ಸಂಬಂಧ ವಿಚಾರಣೆ ನಡೆಯುತ್ತಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂದೂ ಐಟಿ ಸೆಲ್ ಸಂಸ್ಥಾಪಕ ರಮೇಶ್ ಸೋಲಂಕಿ ಅವರು ದಕ್ಷಿಣ ಮುಂಬೈನ ಲೋಕಮಾನ್ಯ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರ ದೂರಿನ ಪ್ರಕಾರ, 'ಅನ್ನಪೂರ್ಣಿ' ಚಿತ್ರವು ಭಗವಾನ್ ರಾಮನನ್ನು ಅವಮಾನಿಸುತ್ತದೆ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ದೂರಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಸಿನಿಮಾದ ಕೆಲವು ದೃಶ್ಯಗಳನ್ನೂ ಸೋಲಂಕಿ ಉಲ್ಲೇಖಿಸಿದ್ದಾರೆ.

ದೂರಿನಲ್ಲಿ, ಚಿತ್ರದಲ್ಲಿ ದೇವಸ್ಥಾನವೊಂದರ ಅರ್ಚಕರ ಮಗಳಾಗಿರುವ ನಯನತಾರಾ ಅವರು ಬಿರಿಯಾನಿ ಮಾಡುವ ಮುನ್ನ 'ಹಿಜಾಬ್' ಧರಿಸಿ ನಮಾಜ್ ಮಾಡುವುದನ್ನು ತೋರಿಸುವ ಸಿನಿಮಾದ ಕೊನೆಯ ದೃಶ್ಯವನ್ನು ಉಲ್ಲೇಖಿಸಲಾಗಿದೆ.

ಮತ್ತೊಂದು ದೃಶ್ಯದಲ್ಲಿ, ನಯನತಾರಾ ಪಾತ್ರದ ಸ್ನೇಹಿತ ಫರ್ಹಾನ್, ಮಾಂಸವನ್ನು ಕತ್ತರಿಸಲು ಆಕೆಯ ಬ್ರೈನ್ ವಾಶ್ ಮಾಡುತ್ತಾನೆ ಮತ್ತು ಭಗವಾನ್ ಶ್ರೀ ರಾಮ ಮತ್ತು ಸೀತೆ ಕೂಡ ಮಾಂಸ ಸೇವಿಸಿದ್ದಾರೆ ಎಂದು ಹೇಳುತ್ತಾರೆ. ಅಲ್ಲದೆ, ನಯನತಾರಾ ಪಾತ್ರ ದೇವಸ್ಥಾನಕ್ಕೆ ಹೋಗದೆ, ಫರ್ಹಾನ್‌ನ ಜಾಗಕ್ಕೆ 'ಇಫ್ತಾರಿ'ಗೆ ಹೋಗುವ ಇನ್ನೊಂದು ದೃಶ್ಯವನ್ನು ಇದು ಉಲ್ಲೇಖಿಸುತ್ತದೆ.

ನಟಿ ನಯನತಾರಾ, ನಿರ್ದೇಶಕ ನೀಲೇಶ್ ಕೃಷ್ಣ ಮತ್ತು ಇತರರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಮತ್ತು ಲವ್ ಜಿಹಾದ್ ಪ್ರಚಾರಕ್ಕಾಗಿ ಎಫ್‌ಐಆರ್ ದಾಖಲಿಸಬೇಕು ಎಂದು ಸೋಲಂಕಿ ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ.

ನಟಿ ಮತ್ತು ಇತರರ ವಿರುದ್ಧ ಲಿಖಿತ ದೂರನ್ನು ನಾವು ಸ್ವೀಕರಿಸಿದ್ದೇವೆ. ದೂರುದಾರರು ಇದುವರೆಗೆ ಠಾಣೆಗೆ ಭೇಟಿ ನೀಡಿಲ್ಲ. ಅವರು ಪೊಲೀಸರ ಮುಂದೆ ಹಾಜರಾಗಲು ನಾವು ಕಾಯುತ್ತಿದ್ದೇವೆ. ನಂತರವಷ್ಟೇ ನಾವು ಮುಂದಿನ ಕ್ರಮವನ್ನು ತೆಗೆದುಕೊಳ್ಳಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com