ದೇಶದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಉದ್ಘಾಟಿಸಿದ ಪ್ರಧಾನಿ ಮೋದಿ

ದೇಶದ ಅತಿ ಉದ್ದದ ಸಮುದ್ರ ಸೇತುವೆ, ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದರು.
ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಉದ್ಘಾಟಿಸಿದ ಪ್ರಧಾನಿ ಮೋದಿ
ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಉದ್ಘಾಟಿಸಿದ ಪ್ರಧಾನಿ ಮೋದಿ

ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆ, ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದರು.

ಮುಂಬೈನ ಸೆವ್ರಿ ಮತ್ತು ರಾಯಗಡ ಜಿಲ್ಲೆಯ ಪನ್ವೆಲ್ ನಡುವಿನ 21.8 ಕಿಮೀ ಉದ್ದದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಸೇತುವೆಗೆ ಪ್ರಧಾನಿ ಮೋದಿ ಇಂದು ಅಧಿಕೃತವಾಗಿ ಚಾಲನೆ ನೀಡಿದರು.

ಈ ವೇಳೆ ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಹಾಜರಿದ್ದರು.

ಈ ಸೇತುವೆ ರಾಯಗಢ ಜಿಲ್ಲೆಯ ಪನ್ವೆಲ್ ಮತ್ತು ದಕ್ಷಿಣ ಮಧ್ಯ ಮುಂಬೈನ ಸೆವ್ರಿ ನಡುವಿನ ಅಂತರವನ್ನು ಕಡಿಮೆಗೊಳಿಸುತ್ತದೆ ಮತ್ತು ಪ್ರಯಾಣದ ಸಮಯ ಸುಮಾರು ಎರಡು ಗಂಟೆಗಳಿಂದ 15 ರಿಂದ 20 ನಿಮಿಷಗಳಿಗೆ ಇಳಿಯಲಿದೆ .

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com