ರಾಮಮಂದಿರ ಪ್ರಾಣಪ್ರತಿಷ್ಠಾಪನೆಯನ್ನು ದೀಪಾವಳಿಯಂತೆ ಸಂಭ್ರಮಿಸಿ, ದೀಪ ಬೆಳಗಿ: ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ಜ.22 ರಂದು ನಡೆಯಲಿರುವ ರಾಮ ಮಂದಿರ ಪ್ರಾಣಪ್ರತಿಷ್ಠಾಪನೆಯ ಕಾರ್ಯಕ್ರಮವನ್ನು ದೀಪಾವಳಿ ಮಾದರಿ ಸಂಭ್ರಮಿಸಿ ದೀಪ ಬೆಳಗಿ ಎಂದು ಪ್ರಧಾನಿ ಮೋದಿ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕರೆ ನೀಡಿದ್ದಾರೆ. 
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ (ಸಂಗ್ರಹ ಚಿತ್ರ)
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ (ಸಂಗ್ರಹ ಚಿತ್ರ)

ನವದೆಹಲಿ: ಅಯೋಧ್ಯೆಯಲ್ಲಿ ಜ.22 ರಂದು ನಡೆಯಲಿರುವ ರಾಮ ಮಂದಿರ ಪ್ರಾಣಪ್ರತಿಷ್ಠಾಪನೆಯ ಕಾರ್ಯಕ್ರಮವನ್ನು ದೀಪಾವಳಿ ಮಾದರಿ ಸಂಭ್ರಮಿಸಿ ದೀಪ ಬೆಳಗಿ ಎಂದು ಪ್ರಧಾನಿ ಮೋದಿ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕರೆ ನೀಡಿದ್ದಾರೆ. 

ರಾಮಮಂದಿರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮನೆಗಳಲ್ಲಿ ದೀಪ ಬೆಳಗಿ, ಬಡವರಿಗೆ ಅಗತ್ಯ ನೆರವು ನೀಡಿ ಎಂದು ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಹೇಳಿದ್ದಾರೆ. 

ತಮ್ಮ ತಮ್ಮ ರಾಜ್ಯಗಳಿಂದ ಭಕ್ತಾದಿಗಳೊಂದಿಗೆ ಜ.22 ರ ನಂತರ ರಾಮ ಮಂದಿರಕ್ಕೆ ಭೇಟಿ ನೀಡುವಂತೆ ಮೋದಿ ಸಚಿವರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
 
ಜ.22 ರಂದು ಅಯೋಧ್ಯೆಗೆ ಭೇಟಿ ನೀಡುವ ಭಕ್ತಾದಿಗಳಿಗೆ ಬಿಜೆಪಿ ತನ್ನ ಕಾರ್ಯಕರ್ತರ ಮೂಲಕ ಅಗತ್ಯವಿರುವ ವ್ಯವಸ್ಥೆ ಮಾಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com