ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲಿನ ದಾಳಿ ಖಂಡಿಸಿದ ಕಾಂಗ್ರೆಸ್

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೇಲೆ ಬಿಜೆಪಿ ಗೂಂಡಾಗಳು ನಡೆಸಿದ ದಾಳಿಯನ್ನು ಖಂಡಿಸುವುದಾಗಿ ಕಾಂಗ್ರೆಸ್ ಶನಿವಾರ ಹೇಳಿದೆ ಮತ್ತು ರಾಜ್ಯದಲ್ಲಿ ಆಡಳಿತ ಪಕ್ಷ, ಭಾರತ ಸಂವಿಧಾನ ಜನರಿಗೆ ನೀಡಿರುವ...
ಭಾರತ್ ಜೋಡೋ ನ್ಯಾಯ್ ಯಾತ್ರೆ
ಭಾರತ್ ಜೋಡೋ ನ್ಯಾಯ್ ಯಾತ್ರೆ

ನವದೆಹಲಿ: ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೇಲೆ ಬಿಜೆಪಿ ಗೂಂಡಾಗಳು ನಡೆಸಿದ ದಾಳಿಯನ್ನು ಖಂಡಿಸುವುದಾಗಿ ಕಾಂಗ್ರೆಸ್ ಶನಿವಾರ ಹೇಳಿದೆ ಮತ್ತು ರಾಜ್ಯದಲ್ಲಿ ಆಡಳಿತ ಪಕ್ಷ, ಭಾರತ ಸಂವಿಧಾನ ಜನರಿಗೆ ನೀಡಿರುವ ಪ್ರತಿಯೊಂದು ಹಕ್ಕು ಮತ್ತು ನ್ಯಾಯವನ್ನು "ತುಳಿಯಲು" ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.

ನಮ್ಮ ಕಾರ್ಯಕರ್ತರು ಮತ್ತು ಮುಖಂಡರನ್ನು ಬೆದರಿಸುವ ಇಂತಹ ತಂತ್ರಗಳಿಗೆ ಪಕ್ಷ ಹೆದರುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಸ್ಸಾಂನ ಲಖಿಂಪುರದಲ್ಲಿ ಬಿಜೆಪಿ ಗೂಂಡಾಗಳು ಭಾರತ್ ಜೋಡೋ ನ್ಯಾಯ್ ಯಾತ್ರೆಯ ವಾಹನಗಳ ಮೇಲೆ ದಾಳಿ ನಡೆಸಿರುವುದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ಪಕ್ಷದ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಹರಿದು ಹಾಕಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಕಳೆದ 10 ವರ್ಷಗಳಲ್ಲಿ, ಬಿಜೆಪಿಯು ಭಾರತದ ಜನರಿಗೆ ಸಂವಿಧಾನ ಖಾತರಿಪಡಿಸಿದ ಪ್ರತಿಯೊಂದು ಹಕ್ಕು ಮತ್ತು ನ್ಯಾಯವನ್ನು ತುಳಿಯಲು ಮತ್ತು ನಾಶ ಮಾಡಲು ಪ್ರಯತ್ನಿಸಿದೆ. ಈ ಮೂಲಕ ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ಯತ್ನಿಸುತ್ತಿದೆ" ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com