ಸಂವಿಧಾನ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ: ರಾಹುಲ್ ಗಾಂಧಿ
ನವದೆಹಲಿ: ಸಂವಿಧಾನದ ಮೂಲಭೂತ ತತ್ವಗಳನ್ನು ರಕ್ಷಿಸುವುದೇ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.
ಗಣರಾಜ್ಯೋತ್ಸವದಂದು ದೇಶದ ನಾಗರಿಕರಿಗೆ ಶುಭಾಶಯ ಕೋರಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ಒಂದುಗೂಡಿಸುವ ಸಂವಿಧಾನ ಭಾರತೀಯ ಪ್ರಜಾತಂತ್ರದ ಆತ್ಮವಾಗಿದೆ ಎಂದಿದ್ದಾರೆ.
ಗಣರಾಜ್ಯೋತ್ಸವ ಅಂಗವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಫೋಸ್ಟ್ ಮಾಡಿದ್ದು, ಸಂವಿಧಾನದ ಮೂಲಭೂತ ತತ್ವಗಳ ರಕ್ಷಣೆ ಮತ್ತು ನಿಷ್ಠೆಯು ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ. ಗಣರಾಜ್ಯೋತ್ಸವದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು. ಜೈ ಹಿಂದ್" ಎಂದು ಅವರು ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಕೂಡ ತಮ್ಮ ದೇಶವಾಸಿಗಳಿಗೆ ಸಂವಿಧಾನದ ಮೂಲಭೂತ ತತ್ವಗಳನ್ನು ರಕ್ಷಿಸುವಂತೆ ಕರೆ ನೀಡಿದ್ದಾರೆ. “ಅನ್ಯಾಯ ಮತ್ತು ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತುವುದು ನಮ್ಮ ಕರ್ತವ್ಯ. ದೇಶದ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನಮಗೆ ನ್ಯಾಯದ ಹಕ್ಕು ಸಿಗುವವರೆಗೂ ನಾವು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ