ಉದ್ಯೋಗಕ್ಕಾಗಿ ಭೂ ಹಗರಣ: ರಾಬ್ರಿದೇವಿ, ಇಬ್ಬರು ಪುತ್ರಿಯರಿಗೆ ಕೋರ್ಟ್ ಸಮನ್ಸ್!
ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಲ್ಲಿಸಿರುವ ಮೊದಲ ಆರೋಪಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರಿಯರಾದ ರಾಜ್ಯಸಭಾ ಸಂಸದೆ ಮಿಸಾ ಭಾರ್ತಿ ಮತ್ತು ಹೇಮಾ ಯಾದವ್‌ಗೆ ದೆಹಲಿ ನ್ಯಾಯಾಲಯ ಶನಿವಾರ ಸಮನ್ಸ್ ಜಾರಿ ಮಾಡಿದೆ.
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಕುಟುಂಬ ಸದಸ್ಯರಿಗೆ ಸಮನ್ಸ್ ನೀಡಲು ಕೇಂದ್ರ ತನಿಖಾ ಸಂಸ್ಥೆಯಿಂದ ಸಾಕಷ್ಟು ಸಾಕ್ಷ್ಯ ಇರುವುದನ್ನು ಗಮನಿಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ಫೆಬ್ರವರಿ 9 ರಂದು ರೂಸ್ ಅವೆನ್ಯೂ ಕೋರ್ಟ್‌ಗೆ ಹಾಜರಾಗುವಂತೆ ಆರೋಪಿಗಳಿಗೆ ಸೂಚಿಸಿದ್ದಾರೆ. ಈ ಹಿಂದೆ ಪ್ರಕರಣದ ವಿಚಾರಣೆ ನಡೆಸುವಾಗ ದೂರಿನಲ್ಲಿ ಬೃಹತ್ ದಾಖಲೆ ಇರುವುದನ್ನು ನ್ಯಾಯಾಲಯ ಗಮನಿಸಿದೆ.
ಲಾಲು ಅವರು 2004 ಮತ್ತು 2009 ರ ನಡುವೆ ರೈಲ್ವೆ ಸಚಿವರಾಗಿದ್ದಾಗ ಲಾಲು ಅವರ ಕುಟುಂಬಕ್ಕೆ ಉಡುಗೊರೆಯಾಗಿ ನೀಡಿದ ಅಥವಾ ಮಾರಾಟವಾದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಈ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಇದರಲ್ಲಿ ಮಾಜಿ ರೈಲ್ವೆ ಉದ್ಯೋಗಿ ಹೃದಯಾನಂದ ಚೌಧರಿ ಮತ್ತು ಕಳೆದ ನವೆಂಬರ್‌ನಲ್ಲಿ ಬಂಧಿತರಾಗಿದ್ದ ಎ ಕೆ ಇನ್ಫೋಸಿಸ್ಟಮ್ಸ್‌ನ ನಿರ್ದೇಶಕ ಅಮಿತ್ ಕತ್ಯಾಲ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ