ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್‌ ನಾಪತ್ತೆ: ಮಾಹಿತಿ ನೀಡಿದವರಿಗೆ 11 ಸಾವಿರ ರೂ. ಬಹುಮಾನ ಎಂದ ಬಿಜೆಪಿ

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ "ಹಠಾತ್ ನಾಪತ್ತೆ"ಯಿಂದಾಗಿ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟಿನಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು ಮಂಗಳವಾರ...
ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್
ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ "ಹಠಾತ್ ನಾಪತ್ತೆ"ಯಿಂದಾಗಿ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟಿನಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು ಮಂಗಳವಾರ ಹೇಳಿದ್ದಾರೆ.

ಮುಖ್ಯಮಂತ್ರಿಯ ಬಗ್ಗೆ ಮಾಹಿತಿ ನೀಡಿದವರಿಗೆ ತಮ್ಮ ಕಡೆಯಿಂದ 11,000 ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ ಮರಾಂಡಿ, ಎಕ್ಸ್‌ನಲ್ಲಿ ಸಿಎಂ ‘ಕಾಣೆ’ಯಾಗಿದ್ದಾರೆ ಎಂದು ಪೋಸ್ಟರ್ ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮರಾಂಡಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ಸಿಎಂ ಇರುವ ಸ್ಥಳದ ಬಗ್ಗೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಗುಪ್ತಚರ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಇದು ಗಂಭೀರ ವಿಚಾರ ಎಂದರು.

ಹೇಮಂತ್ ಸೋರೆನ್ ಅವರ ದಿಢೀರ್ ನಾಪತ್ತೆಯಿಂದಾಗಿ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟಿನಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿಗಳ ಬಗ್ಗೆ ಸರಿಯಾದ ಮಾಹಿತಿ ನೀಡಿದವರಿಗೆ ನಮ್ಮ ಕಡೆಯಿಂದ 11 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಅವರು ಹೇಳಿದರು.

ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೋರೆನ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ್ದು, ಬಂಧನ ಭೀತಿ ಎದುರಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com