INDIA ಕೂಟಕ್ಕೆ ದೊಡ್ಡ ಹೊಡೆತ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು

ಚಂಡೀಗಢ ಮೇಯರ್ ಚುನಾವಣೆಯಲ್ಲಿ AAP-Congress ಮೈತ್ರಿಕೂಟಕ್ಕೆ ಭಾರೀ ಹಿನ್ನಡೆಯಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಸೋಂಕರ್ ಗೆಲುವು ಸಾಧಿಸಿದ್ದಾರೆ. 
ಬಿಜೆಪಿ ಅಭ್ಯರ್ಥಿ ಮನೋಜ್ ಸೋಂಕರ್
ಬಿಜೆಪಿ ಅಭ್ಯರ್ಥಿ ಮನೋಜ್ ಸೋಂಕರ್

ಚಂಡೀಗಢ ಮೇಯರ್ ಚುನಾವಣೆಯಲ್ಲಿ AAP-Congress ಮೈತ್ರಿಕೂಟಕ್ಕೆ ಭಾರೀ ಹಿನ್ನಡೆಯಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಸೋಂಕರ್ ಗೆಲುವು ಸಾಧಿಸಿದ್ದಾರೆ. 

ಲೋಕಸಭೆ ಚುನಾವಣೆಗೂ ಮುನ್ನ ಬಂದಿರುವ ಈ ಫಲಿತಾಂಶ ಇಂಡಿಯಾ ಮೈತ್ರಿಕೂಟಕ್ಕೆ ಹೊಡೆತ ಎಂದೇ ಪರಿಗಣಿಸಲಾಗುತ್ತಿದೆ. ಮನೋಜ್ ಕುಮಾರ್ 16 ಮತಗಳನ್ನು ಪಡೆದರೆ, ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ 12 ಮತಗಳನ್ನು ಪಡೆದರು. ಆದರೆ 8 ಮತಗಳು ರದ್ದಾಗಿವೆ.

ಫಲಿತಾಂಶದಲ್ಲಿ ಬಿಜೆಪಿ ರಿಗ್ಗಿಂಗ್ ಮಾಡಿದೆ ಎಂದು ಎಎಪಿ ಆರೋಪಿಸಿದೆ. ಎಎಪಿ ಕೌನ್ಸಿಲರ್ ಕಮಲಪ್ರೀತ್ ಮಾಧ್ಯಮಗಳ ಜೊತೆ ಮಾತನಾಡುತ್ತಾ ಮತಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದರು. ಇದು ಮೋಸ. ಎಂಟು ಮತಗಳು ರದ್ದಾಗಿವೆ. ಮತಗಳನ್ನು ಏಕೆ ರದ್ದುಗೊಳಿಸಲಾಗಿದೆ ಎಂಬುದನ್ನು ತಿಳಿಸಿಲ್ಲ ಎಂದು ಹೇಳಿದರು.

ಚಂಡೀಗಢ ಮೇಯರ್ ಚುನಾವಣೆಗೆ ಜನವರಿ 18ರಂದು ಮತದಾನ ನಡೆಯಬೇಕಿತ್ತು. ಆದರೆ ಅಧ್ಯಕ್ಷರು ಅಸ್ವಸ್ಥರಾದ ನಂತರ ಚಂಡೀಗಢ ಆಡಳಿತವು ಫೆಬ್ರವರಿ 6ಕ್ಕೆ ಮುಂದೂಡಿತು. ಇದರ ವಿರುದ್ಧ ಆಮ್ ಆದ್ಮಿ ಪಕ್ಷ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಚುನಾವಣೆಯನ್ನು ಮುಂದೂಡುವ ಆಡಳಿತದ ಆದೇಶದ ವಿರುದ್ಧ ಕಾಂಗ್ರೆಸ್ ಮತ್ತು ಎಎಪಿಯ ಕೌನ್ಸಿಲರ್‌ಗಳು ಪ್ರತಿಭಟನೆ ನಡೆಸಿದ್ದರು. ಬಿಗಿ ಭದ್ರತೆಯ ನಡುವೆ ಜನವರಿ 30ರಂದು ಮತದಾನ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com