ಜಮ್ಮು ಮತ್ತು ಕಾಶ್ಮೀರ: ಪೂಂಚ್‌ನಲ್ಲಿ ಕದನ ವಿರಾಮ ಉಲ್ಲಂಘನೆ, ಭಾರತದೊಳಗೆ ನುಸುಳಿದ 'ಪಾಕ್' ಪಡೆಗಳು!

ಪಾಕಿಸ್ತಾನದ ಕಡೆಯಲ್ಲಿ ಸಾವುನೋವು ಸಂಭವಿಸಿದೆ ಎಂದು ಮತ್ತೊಂದು ಮೂಲ ವರದಿ ಮಾಡಿದೆ. ಆದರೆ, ಭಾರತದ ಕಡೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರತೀಯ ಸೈನಿಕರು ಗಸ್ತು ತಿರುಗುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರತೀಯ ಸೈನಿಕರು ಗಸ್ತು ತಿರುಗುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)
Updated on

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಪ್ರದೇಶದ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ ಮತ್ತು ಅತಿಕ್ರಮಣ ನಡೆದಿದೆ ಎಂದು ವರದಿಯಾಗಿದೆ.

ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತಿಕ್ರಿಯೆ ನೀಡಿದೆ ಎಂದು ಸೇನಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬರ್ತ್ವಾಲ್ ಬುಧವಾರ ಹೇಳಿದ್ದಾರೆ.

'ಏಪ್ರಿಲ್ 1 ರಂದು ಗಡಿ ನಿಯಂತ್ರಣ ರೇಖೆಯಾದ್ಯಂತ (LoC) ದಾಟಿ ಪಾಕಿಸ್ತಾನ ಸೇನೆಯ ಒಳನುಸುಳುವಿಕೆಯ ಪರಿಣಾಮವಾಗಿ ಕೃಷ್ಣ ಘಾಟಿ ವಲಯದಲ್ಲಿ ಗಣಿ ಸ್ಫೋಟ ಸಂಭವಿಸಿದೆ. ಇದರ ನಂತರ ಕದನ ವಿರಾಮ ಒಪ್ಪಂದದ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ' ಎಂದು ತಿಳಿಸಿದರು.

ಪಾಕಿಸ್ತಾನದ ಕಡೆಯಲ್ಲಿ ಸಾವುನೋವು ಸಂಭವಿಸಿದೆ ಎಂದು ಮತ್ತೊಂದು ಮೂಲ ವರದಿ ಮಾಡಿದೆ. ಆದರೆ, ಭಾರತದ ಕಡೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

ಗಡಿ ನಿಯಂತ್ರಣ ರೇಖೆಯಲ್ಲಿ (LoC) ಸಂಘರ್ಷಗಳನ್ನು ತಡೆಗಟ್ಟಲು ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಉಭಯ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMO) ಒಪ್ಪಿಕೊಂಡ ತತ್ವಗಳನ್ನು ಪಾಲಿಸುವ ಮಹತ್ವವನ್ನು ಭಾರತೀಯ ಸೇನೆಯು ಒತ್ತಿಹೇಳಿದೆ ಎಂದು ಕರ್ನಲ್ ಬಾರ್ತ್ವಾಲ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರತೀಯ ಸೈನಿಕರು ಗಸ್ತು ತಿರುಗುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)
Watch | ಜಮ್ಮು-ಕಾಶ್ಮೀರ, ಕಥುವಾ: ಹಿರಾನಗರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ

2021ರ ಫೆಬ್ರುವರಿಯಿಂದ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMO) 2003ರ ಕದನ ವಿರಾಮ ಒಪ್ಪಂದಕ್ಕೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ ನಂತರ, ವಾಸ್ತವಿಕ ಗಡಿಯಲ್ಲಿ ಪರಿಸ್ಥಿತಿ ಗಮನಾರ್ಹವಾಗಿ ಬದಲಾಗಿದೆ.

ಭಾರತವು ಪಾಕಿಸ್ತಾನದೊಂದಿಗೆ ಒಟ್ಟು 3,323 ಕಿಮೀ ಗಡಿಯನ್ನು ಹಂಚಿಕೊಂಡಿದ್ದು, ಇದನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ. ಗುಜರಾತ್‌ನಿಂದ ಜಮ್ಮುವಿನ ಅಖ್ನೂರ್‌ನಲ್ಲಿರುವ ಚೆನಾಬ್ ನದಿಯ ಉತ್ತರದ ದಂಡೆಯವರೆಗೆ ಸುಮಾರು 2,400 ಕಿಮೀ ಉದ್ದದ ಅಂತರರಾಷ್ಟ್ರೀಯ ಗಡಿ (IB); ಜಮ್ಮುವಿನ ಕೆಲವು ಭಾಗಗಳಿಂದ ಲೇಹ್‌ನ ಕೆಲವು ಭಾಗಗಳವರೆಗೆ 740 ಕಿಮೀ ಉದ್ದದ ಗಡಿ ನಿಯಂತ್ರಣ ರೇಖೆ (LoC) ಮತ್ತು ಸಿಯಾಚಿನ್ ಪ್ರದೇಶವನ್ನು NJ 9842 ರಿಂದ ಉತ್ತರದಲ್ಲಿ ಇಂದಿರಾ ಕೋಲ್ ವರೆಗೆ ವಿಭಜಿಸುವ 110 ಕಿಮೀ ಉದ್ದದ ವಾಸ್ತವಿಕ ನೆಲದ ಸ್ಥಾನ ರೇಖೆ (AGPL).

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com