
ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಏಪ್ರಿಲ್ 5 ರಂದು ಹಾಜರಾಗುವಂತೆ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ 3ನೇ ಬಾರಿಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಮಂಗಳವಾರ ಸಮನ್ಸ್ ಜಾರಿ ಮಾಡಲಾಗಿದ್ದು, ಕಾಮ್ರಾ (36) ಅವರನ್ನು ಖಾರ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ,
ಪೊಲೀಸರು ಅವರಿಗೆ ಈ ಹಿಂದೆ ಎರಡು ಬಾರಿ ಸಮನ್ಸ್ ಜಾರಿ ಮಾಡಿದ್ದರು ಆದರೆ, ತನಿಖೆಗೆ ಹಾಜರಾಗದೆ ತನಿಖೆಗ ಸಹಕರಿಸಿದ್ದರು.
ಕುನಾಲ್ ಕಾಮ್ರಾ ಅವರು ಮುಂಬೈನ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ಕಾರ್ಯಕ್ರಮ ನೀಡುವಾಗ ಮಹಾರಾಷ್ಟ್ರದ ರಾಜಕೀಯ ವಿಭಜನೆಯ ಬಗ್ಗೆ ಮಾತನಾಡಿದ್ದರು.
ಉಲ್ಲೇಖಿಸಿ ದಿಲ್ ತೋ ಪಾಗಲ್ ಹೈ ಹಾಡನ್ನು ಅಣಕಿಸುವ ರೀತಿಯಲ್ಲಿ ರಾಜಕೀಯ ಪಕ್ಷಗಳನ್ನು ವಿಲೀನಗೊಳಿಸಿ ಹಾಡಿದ್ದರು. ಆದರೆ, ಕಾಮ್ರಾ ಶಿಂಧೆ ಅವರ ಹೆಸರನ್ನು ಸ್ಪಷ್ಟವಾಗಿ ಎಲ್ಲೂ ಉಲ್ಲೇಖಿಸರಲಿಲ್ಲ.
ಏಕನಾಥ್ ಶಿಂಧೆ - ಉದ್ದವ್ ಠಾಕ್ರೆ ನಡುವಿನ ರಾಜಕೀಯ ಉಲ್ಲೇಖಿಸುತ್ತಾ ಮೊದಲು ಶಿವಸೇನಾ ಬಿಜೆಪಿಯಿಂದ ಹೊರಬಂದಿತು, ನಂತರ ಶಿವಸೇನಾ ಶಿವಸೇನಾದಿಂದಲೇ ಹೊರಬಂದಿತು. ಎನ್‌ಸಿಪಿಯಿಂದ ಎನ್‌ಸಿಪಿ ಹೊರಬಂದಿತು. ಇವರೆಲ್ಲಾ ಒಂದು ಮತದಾರನಿಗೆ 9 ಬಟನ್‌ಗಳನ್ನು ನೀಡಿದ್ದಾರೆ. ಥಾಣೆಯು ರಾಜಕೀಯ ಭದ್ರಕೋಟೆಯಾಗಿದ್ದು, ಗದ್ದಾರ್ (ದ್ರೋಹಿ) ಆಳ್ವಿಕೆ ಎಂದು ಪರೋಕ್ಷವಾಗಿ ಹಾಡು ಹೇಳುತ್ತಾ ಟೀಕಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
Advertisement