ಮಳೆ ಮತ್ತು ತಾಪಮಾನ ಏರಿಕೆ: ದೇಶಾದ್ಯಂತ ಹವಾಮಾನ ಬದಲಾವಣೆ- IMD ಎಚ್ಚರಿಕೆ

ದೆಹಲಿಯಲ್ಲಿ ತಾಪಮಾನ ಹೆಚ್ಚಾದಂತೆ, ಮುಂದಿನ ದಿನಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಏಪ್ರಿಲ್ 3 ರಿಂದ 5 ರವರೆಗೆ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ದಾಟಬಹುದು.
Rain and temperature
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ದೇಶಾದ್ಯಂತ ಹವಾಮಾನದಲ್ಲಿನ ಬದಲಾವಣೆಗಳ ಕುರಿತು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಚಂಡಮಾರುತದ ಪರಿಚಲನೆಯು ಅನೇಕ ರಾಜ್ಯಗಳಲ್ಲಿ ಅತ್ಯಂತ ಹೆಚ್ಚಿನ ತಾಪಮಾನದ ಜೊತೆಗೆ ಮಳೆ ಸಹ ಬರಬಹುದು ಎಂದು ಎಚ್ಚರಿಕೆ ನೀಡಿದೆ.

ಐಎಂಡಿ ಮುನ್ಸೂಚನೆಯ ಪ್ರಕಾರ, ಏಪ್ರಿಲ್ ನಿಂದ ಜೂನ್ ವರೆಗೆ ಭಾರತದಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಮಧ್ಯ, ಪೂರ್ವ ಭಾರತ ಮತ್ತು ವಾಯುವ್ಯ ಬಯಲು ಪ್ರದೇಶಗಳಲ್ಲಿ ಹೆಚ್ಚಿನ ಸಮಯ ಶಾಖದ ಅಲೆಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ತಾಪಮಾನ ಏರಿಕೆ

ದೆಹಲಿಯಲ್ಲಿ ತಾಪಮಾನ ಹೆಚ್ಚಾದಂತೆ, ಮುಂದಿನ ದಿನಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಏಪ್ರಿಲ್ 3 ರಿಂದ 5 ರವರೆಗೆ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ದಾಟಬಹುದು ಎಂದು ಐಎಂಡಿ ಮುನ್ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ ತಾಪಮಾನ ಈಗಾಗಲೇ 34.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

Rain and temperature
Bengaluru Weather Forecast: ಬೆಂಗಳೂರಿನಲ್ಲಿ ಭಾರಿ ಮಳೆ, IMD ಯೆಲ್ಲೋ ಅಲರ್ಟ್ ಘೋಷಣೆ; ಚಂಡಮಾರುತ ಕಾರಣ!

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ತಾಪಮಾನ ಏರಿಕೆ

ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ, ಛತ್ತೀಸ್‌ಗಢ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ತಾಪಮಾನ ಮತ್ತು ಶಾಖದ ಅಲೆಗಳು ಬೀಸುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳಾದ ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

ಏಪ್ರಿಲ್ 4 ರಂದು ಮಳೆ

ಮಧ್ಯ, ದಕ್ಷಿಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ಪಶ್ಚಿಮ ರಾಜ್ಯಗಳಲ್ಲಿ ಹೆಚ್ಚಿನ ತಾಪಮಾನ ಉಂಟಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್ 4 ರವರೆಗೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಏಪ್ರಿಲ್ 4 ರವರೆಗೆ ಮಧ್ಯಪ್ರದೇಶ, ಕರ್ನಾಟಕ, ಕೇರಳ, ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಗಾಳಿಯ ವೇಗ ಗಂಟೆಗೆ 30 ರಿಂದ 60 ಕಿ.ಮೀ. ತಲುಪುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com