ನೋಯ್ಡಾ: ಅಕ್ರಮ ಸಂಬಂಧ ಶಂಕೆ; ಸುತ್ತಿಗೆಯಿಂದ ಪತ್ನಿ ತಲೆಗೆ ಹೊಡೆದು ಕೊಂದ ಪತಿ!

ಕೊಲೆ ನಡೆದ ನಂತರ ದಂಪತಿಯ ಮಗ 112 ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ನೂರ್-ಉಲ್ಲಾ ಹೈದರ್, ಆಸ್ಮಾ ಖಾನ್
ನೂರ್-ಉಲ್ಲಾ ಹೈದರ್, ಆಸ್ಮಾ ಖಾನ್
Updated on

ನೋಯ್ಡಾ: ನೋಯ್ಡಾದ ಸೆಕ್ಟರ್ 15 ರಲ್ಲಿ ಶುಕ್ರವಾರ 55 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು NDTV ವರದಿ ಮಾಡಿದೆ.

ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದ ಮೇಲೆ ಈ ವ್ಯಕ್ತಿ ತನ್ನ ಪತ್ನಿಯನ್ನು ಕೊಂದಿದ್ದಾನೆ. ಆರೋಪಿ ನೂರ್-ಉಲ್ಲಾ ಹೈದರ್, ತನ್ನ ಪತ್ನಿ ಆಸ್ಮಾ ಖಾನ್ ಜೊತೆ ಜಗಳವಾಡಿದ ನಂತರ ಆಕೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ.

ಕೊಲೆ ನಡೆದ ನಂತರ ದಂಪತಿಯ ಮಗ 112 ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ನಂತರ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ತಂಡ ಸ್ಥಳಕ್ಕೆ ತೆರಳಿ, ಹೈದರ್ ನನ್ನು ವಶಕ್ಕೆ ಪಡೆದಿದ್ದಾರೆ. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಹೈದರ್ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸುತ್ತಿದ್ದ. ಇದು ಅವರ ನಡುವೆ ನಿರಂತರ ಜಗಳಕ್ಕೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ನೂರ್-ಉಲ್ಲಾ ಹೈದರ್, ಆಸ್ಮಾ ಖಾನ್
ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನೇ ಸುಪಾರಿ ಕೊಟ್ಟು ಹತ್ಯೆ; ಕೊಲೆ ದೃಶ್ಯ ನೋಡಿ ಪತ್ನಿ ಸಂಭ್ರಮ!

42 ವರ್ಷದ ಅಸ್ಮಾ ಖಾನ್, ನೋಯ್ಡಾದ ಸೆಕ್ಟರ್ 62 ರ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಾಮಿಯಾ ಮಿಲಿಯಾ ಇಸ್ಲಾಮಿಯಾದಿಂದ ಎಂಜಿನಿಯರಿಂಗ್ ಪದವಿ ಪಡೆದಿದ್ದ ಅವರು ಈ ಹಿಂದೆ ದೆಹಲಿಯಲ್ಲಿ ವಾಸಿಸುತ್ತಿದ್ದರು. ಮೂಲತಃ ಬಿಹಾರದ ಹೈದರ್ ಕೂಡ ಎಂಜಿನಿಯರಿಂಗ್ ಪದವೀಧರ ಆಗಿದ್ದು, ಪ್ರಸ್ತುತ ನಿರುದ್ಯೋಗಿಯಾಗಿದ್ದರು.

2005 ರಲ್ಲಿ ಮದುವೆಯಾದ ಈ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಒಬ್ಬ ಮಗ, ಎಂಜಿನಿಯರಿಂಗ್ ಓದುತ್ತಿದ್ದು, ಮಗಳು 8ನೇ ತರಗತಿಯಲ್ಲಿದ್ದಾರೆ.

ಪ್ರಕರಣದ ತನಿಖೆ ಮುಂದುವರೆದಿದ್ದು, ಮರಣೋತ್ತರ ಪರೀಕ್ಷೆಯ ವರದಿ ಮತ್ತು ಇತರ ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com