ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ; ಬ್ರಿಟಿಷರ ಕಾಲದ ಮುಸಲ್ಮಾನ ವಕ್ಫ್ ಕಾಯ್ದೆ ರದ್ದು

ಈ ಮೂಲಕ ಸಂಸತ್ತಿನ ಈ ಕಾಯ್ದೆಗೆ ಏಪ್ರಿಲ್ 5, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆ ಸಿಕ್ಕಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ, 2025" ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿದೆ.
President Draupadi Murmu
ರಾಷ್ಟ್ರಪತಿ ದ್ರೌಪತಿ ಮುರ್ಮು
Updated on

ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಚರ್ಚಾಸ್ಪದ ವಕ್ಫ್ ತಿದ್ದುಪಡಿ ಮಸೂದೆ-2025ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ನಿನ್ನೆ ಶನಿವಾರ ಅಂಕಿತ ಹಾಕಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ, 2025 ಕ್ಕೆ ಸಹ ತಮ್ಮ ಒಪ್ಪಿಗೆ ನೀಡಿದ್ದಾರೆ.

ಈ ಮೂಲಕ ಸಂಸತ್ತಿನ ಈ ಕಾಯ್ದೆಗೆ ಏಪ್ರಿಲ್ 5, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆ ಸಿಕ್ಕಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ, 2025" ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿದೆ. ಮಧ್ಯಾಹ್ನ ಆರಂಭವಾಗಿ ರಾತ್ರಿಯಿಡೀ ಮುಂದುವರಿದು 13 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆಯ ನಂತರ ರಾಜ್ಯಸಭೆಯು ವಿವಾದಾತ್ಮಕ ಶಾಸನಕ್ಕೆ ಅನುಮೋದನೆ ನೀಡಿದ ನಂತರ ಕಳೆದ ಶುಕ್ರವಾರ ಮುಂಜಾನೆ ಸಂಸತ್ತು ಮಸೂದೆಯನ್ನು ಅಂಗೀಕರಿಸಿತು.

ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ಪಕ್ಷಗಳಿಂದ ಮತ್ತು ಮುಸ್ಲಿಂ ಸಂಘಟನೆಗಳಿಂದ ತೀವ್ರ ಆಕ್ಷೇಪಣೆಗಳು ವ್ಯಕ್ತವಾಗಿದೆ. ಅವರು ಮಸೂದೆಯನ್ನು "ಮುಸ್ಲಿಂ ವಿರೋಧಿ" ಮತ್ತು "ಅಸಂವಿಧಾನಿಕ" ಎಂದು ಕರೆದಿದ್ದಾರೆ. ಸರ್ಕಾರವು ಇದನ್ನು "ಐತಿಹಾಸಿಕ ಸುಧಾರಣೆ" ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳುತ್ತಿದೆ.

ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಪರವಾಗಿ 128 ಸದಸ್ಯರು ಮತ್ತು 95 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ಅದಕ್ಕೂ ಮುನ್ನ ಗುರುವಾರ ಮುಂಜಾನೆ ಲೋಕಸಭೆಯಲ್ಲಿ ಇದನ್ನು ಅಂಗೀಕರಿಸಲಾಯಿತು, 288 ಸದಸ್ಯರು ಪರವಾಗಿ ಮತ್ತು 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು.

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸುವುದರ ಜೊತೆಗೆ ಸಂಸತ್ತು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆಯನ್ನು ಸಹ ಅನುಮೋದಿಸಿತು, ರಾಷ್ಟ್ರಪತಿಗಳು ತಮ್ಮ ಒಪ್ಪಿಗೆಯನ್ನು ನೀಡಿದ ನಂತರ, ಮುಸಲ್ಮಾನ್ ವಕ್ಫ್ ಕಾಯ್ದೆ, 1923 ನ್ನು ರದ್ದುಗೊಳಿಸಲಾಗಿದೆ.

ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಸುಪ್ರೀಂ ಕೋರ್ಟ್‌ನಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಸಿಂಧುತ್ವವನ್ನು ಪ್ರಶ್ನಿಸಿ, ಇದು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

President Draupadi Murmu
ವಕ್ಫ್ ಫೈಟ್: ಏನಿದು ವಿವಾದ; ತಿದ್ದುಪಡಿ ಮಸೂದೆಯಿಂದಾಗುವ ಪ್ರಯೋಜನಗಳೇನು?

ಮಸೂದೆಯು ವಕ್ಫ್ ಆಸ್ತಿಗಳು ಮತ್ತು ಅವುಗಳ ನಿರ್ವಹಣೆಯ ಮೇಲೆ "ಅನಿಯಂತ್ರಿತ ನಿರ್ಬಂಧಗಳನ್ನು" ವಿಧಿಸಿದೆ ಎಂದು ಜಾವೇದ್ ಅವರ ಅರ್ಜಿಯಲ್ಲಿ ಆರೋಪಿಸಲಾಗಿದೆ, ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ ಎಂದು ಆರೋಪಿಸಿದ್ದಾರೆ.

ವಕೀಲ ಅನಸ್ ತನ್ವೀರ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, "ಇತರ ಧಾರ್ಮಿಕ ದತ್ತಿಗಳ ಆಡಳಿತದಲ್ಲಿ ಇಲ್ಲದ ನಿರ್ಬಂಧಗಳನ್ನು ವಿಧಿಸುವ" ಮೂಲಕ ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯ ಮಾಡಿದೆ ಎಂದು ಹೇಳಲಾಗಿದೆ.

ಬಿಹಾರದ ಕಿಶನ್‌ಗಂಜ್‌ನ ಲೋಕಸಭಾ ಸಂಸದ ಜಾವೇದ್, ಮಸೂದೆಯ ಜಂಟಿ ಸಂಸದೀಯ ಸಮಿತಿಯ ಸದಸ್ಯರಾಗಿದ್ದರು. ಒಬ್ಬರ ಧಾರ್ಮಿಕ ಆಚರಣೆಯ ಅವಧಿಯನ್ನು ಆಧರಿಸಿ ವಕ್ಫ್‌ಗಳ ರಚನೆಯ ಮೇಲೆ ನಿರ್ಬಂಧಗಳನ್ನು ಪರಿಚಯಿಸುತ್ತದೆ ಎಂದು ಆರೋಪಿಸಿದ್ದಾರೆ.

ತಮ್ಮ ಪ್ರತ್ಯೇಕ ಅರ್ಜಿಯಲ್ಲಿ, ಓವೈಸಿ ಅವರು, ಮಸೂದೆಯು ವಕ್ಫ್‌ಗಳಿಂದ ವಕ್ಫ್‌ಗಳಿಗೆ ಮತ್ತು ಹಿಂದೂ, ಜೈನ ಮತ್ತು ಸಿಖ್ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳಿಗೆ ನೀಡಲಾದ ವಿವಿಧ ರಕ್ಷಣೆಗಳನ್ನು ಕಸಿದುಕೊಂಡಿದೆ ಎಂದು ಹೇಳಿದ್ದಾರೆ.

ವಕೀಲ ಲಜಫೀರ್ ಅಹ್ಮದ್ ಸಲ್ಲಿಸಿದ ಓವೈಸಿ ಅವರ ಅರ್ಜಿಯಲ್ಲಿ, "ಇತರ ಧರ್ಮಗಳ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳಿಗೆ ವಕ್ಫ್‌ಗಳನ್ನು ಉಳಿಸಿಕೊಂಡು ಅವರಿಗೆ ನೀಡಲಾದ ರಕ್ಷಣೆಯನ್ನು ಕಡಿಮೆ ಮಾಡುವುದು ಮುಸ್ಲಿಮರ ವಿರುದ್ಧದ ದ್ವೇಷಪೂರಿತ ತಾರತಮ್ಯವಾಗಿದೆ ಮತ್ತು ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುವ ಸಂವಿಧಾನದ 14 ಮತ್ತು 15 ನೇ ವಿಧಿಗಳ ಉಲ್ಲಂಘನೆಯಾಗಿದೆ" ಎಂದು ಹೇಳಿದ್ದಾರೆ.

ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರು ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅವರು ತಮ್ಮ ಅರ್ಜಿಯಲ್ಲಿ, ಮಸೂದೆಯನ್ನು ಅಸಂವಿಧಾನಿಕ ಮತ್ತು ಸಂವಿಧಾನದ 14, 15, 21, 25, 26, 29, 30 ಮತ್ತು 300-ಎ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಘೋಷಿಸಬೇಕು, ಅದನ್ನು ರದ್ದುಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.

ನಾಗರಿಕ ಹಕ್ಕುಗಳ ರಕ್ಷಣಾ ಸಂಘ ಎಂಬ ಸರ್ಕಾರೇತರ ಸಂಸ್ಥೆಯು ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com