
ನವದೆಹಲಿ: ನೈಋತ್ಯ ದೆಹಲಿಯ ಕಿರ್ಬಿ ಪ್ಲೇಸ್ ಬಸ್ ನಿಲ್ದಾಣ ಪ್ರದೇಶದಲ್ಲಿ 19 ವರ್ಷದ ಮಹಿಳೆಯೊಬ್ಬಳ ಮೇಲೆ ಸಾರ್ವಜನಿಕರ ಮುಂದೆಯೇ ವ್ಯಕ್ತಿಯೊಬ್ಬ ಹಲವಾರು ಬಾರಿ ಚಾಕುವಿನಿಂದ ಇರಿದಿದ್ದಾನೆ.
20 ವರ್ಷದ ವ್ಯಕ್ತಿ ಮಹಿಳೆಗೆ ಇರಿದ ನಂತರ ಅದೇ ಚಾಕುವಿನಿಂದ ತನ್ನನ್ನು ತಾನು ಗಾಯಗೊಳಿಸಿಕೊಂಡಿದ್ದಾನೆ. ಭಾನುವಾರ ರಾತ್ರಿ 9.30 ರ ಸುಮಾರಿಗೆ ದಾರಿಹೋಕರೊಬ್ಬರು ಈ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
"ಹುಡುಗಿಯ ಕುತ್ತಿಗೆ ಮತ್ತು ಹೊಟ್ಟೆಯ ಎಡಭಾಗಕ್ಕೆ ಗಂಭೀರ ಗಾಯಗಳಾಗಿವೆ. ಸ್ಥಳದಿಂದ ಚಾಕು ಪತ್ತೆಯಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿ ಅಮಿತ್ ಮತ್ತು ಸಂತ್ರಸ್ತ ಯುವತಿ ಕಳೆದ ವರ್ಷದಿಂದ ಸ್ನೇಹಿತರಾಗಿದ್ದರು ಮತ್ತು ಯಾವುದೋ ವಿಷಯದ ಬಗ್ಗೆ ಜಗಳವಾಡಿದ್ದರು ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ. "ಇಬ್ಬರನ್ನು ಡಿಡಿಯು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ಬಿಎನ್‌ಎಸ್‌ನ ಸೆಕ್ಷನ್ 109(1) ರ ಅಡಿಯಲ್ಲಿ ದೆಹಲಿ ಕ್ಯಾಂಟ್ ಪೊಲೀಸ್ ಠಾಣೆಯಲ್ಲಿ ಆರೋಪಿ ಅಮಿತ್ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ" ಎಂದು ಅಧಿಕಾರಿ ಹೇಳಿದರು. ಏತನ್ಮಧ್ಯೆ, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
45 ಸೆಕೆಂಡುಗಳ ಈ ಕ್ಲಿಪ್ ಯುವಕ ಮತ್ತು ಯುವತಿ ರಕ್ತಸಿಕ್ತ ಸ್ಥಿತಿಯಲ್ಲಿ ರಸ್ತೆ ವಿಭಜಕದ ಮೇಲೆ ಕುಳಿತಿರುವುದನ್ನು ಮತ್ತು ದಾರಿಹೋಕರ ಗುಂಪು ಅವರ ಸುತ್ತಲೂ ಜಮಾಯಿಸಿರುವುದನ್ನು ತೋರಿಸುತ್ತದೆ.
Advertisement