ಸಿಂಗಾಪುರ ಶಾಲೆಯಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನಿಗೆ ಗಂಭೀರ ಗಾಯ

ಘಟನೆಯಲ್ಲಿ ಪವನ್ ಕಲ್ಯಾಣ ಅವರ ಪುತ್ರ ಮಾರ್ಕ್ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ.
ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವುದು.
ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವುದು.
Updated on

ಸಿಂಗಾಪುರ: ಸಿಂಗಾಪುರ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅದೇ ಶಾಲೆಯಲ್ಲಿ ಓದುತ್ತಿದ್ದ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಘಟನೆಯಲ್ಲಿ ಪವನ್ ಕಲ್ಯಾಣ ಅವರ ಪುತ್ರ ಮಾರ್ಕ್ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಅವರು ಸಿಂಗಾಪುರದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಪವನ್ ಕಲ್ಯಾಣ್ ಮೂರನೇ ಪತ್ನಿ ಅನ್ನಾ ಲೆಜ್ನೇವಾ ಅವರಿಗೆ ಇಬ್ಬರು ಮಕ್ಕಳು ಮಾರ್ಕ್ ಶಂಕರ್ ಮತ್ತು ಪೊಲೇನಾ ಅಂಜನಾ. ಈ ಇಬ್ಬರೂ ಸಹ ಸಿಂಗಪುರದಲ್ಲಿ ನೆಲೆಸಿದ್ದಾರೆ. ಅಲ್ಲಿಯೇ ಶಾಲೆ ಕಲಿಯುತ್ತಿದ್ದಾರೆ.

ಆಂಧ್ಯಪ್ರದೇಶದಲ್ಲಿ ಡಿಸಿಎಂ ಆಗಿರುವ ಪವನ್ ಕಲ್ಯಾಣ್ ಅವರು, ರಾಜಕೀಯದವ್ಲಿ ಬ್ಯುಸಿಯಾಗಿದ್ದು, ಆಂಧ್ರ ಪ್ರದೇಶದಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ತಿಂಗಳಿಗೆ, ವಾರಕ್ಕೆ ಒಮ್ಮೆ ಸಿಂಗಪುರಕ್ಕೆ ಹೋಗಿ ಮಕ್ಕಳು, ಕುಟುಂಬವನ್ನು ಭೇಟಿ ಆಗಿ ಬರುತ್ತಾರೆ ಎನ್ನಲಾಗುತ್ತಿದೆ.

ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವುದು.
ಪವನ್ ಕಲ್ಯಾಣ್ ಬೆಂಗಾವಲು ನಿರ್ಬಂಧಗಳಿಂದ ಸಂಕಷ್ಟ: ತಡವಾಗಿ ತಲುಪಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ಮಿಸ್!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com