ಮುಂದೊಂದು ದಿನ ಈ ದೇಶವನ್ನೇ ಮಾರಿ ಬಿಡುತ್ತಾರೆ: ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ; Video

ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಅನ್ನು ನಿಂದಿಸುವುದನ್ನು ಬಿಟ್ಟರೆ ಮೋದಿಯವರ ಬಳಿ ಯಾವುದಕ್ಕೂ ಉತ್ತವಿಲ್ಲ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ.
ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ.
Updated on

ಅಹಮದಾಬಾದ್: ದೇಶದ ಆರ್ಥಿಕತೆಯಲ್ಲಿ ಏಕಸ್ವಾಮ್ಯವನ್ನು ಸ್ಥಾಪಿಸಲಾಗುತ್ತಿದ್ದು, ಸಾರ್ವಜನಿಕ ಆಸ್ತಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗುತ್ತಿದೆ. ಮುಂದೊಂದು ದಿನ ಈ ದೇಶವನ್ನೇ ಮಾರಿ ಬಿಡುತ್ತಾರೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ವಾಗ್ದಾಳಿ ನಡೆಸಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದ ಆರ್ಥಿಕತೆಯಲ್ಲಿ ಏಕಸ್ವಾಮ್ಯವನ್ನು ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕ ಆಸ್ತಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇಡಬ್ಲ್ಯೂಎಸ್) ಮೀಸಲಾತಿಗೆ ಹೊಡೆತ ಬಿದ್ದಿದೆ. ಉದ್ಯೋಗ ಒದಗಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಹೀಗಾಗಿ ಸಾರ್ವಜನಿಕ ವಲಯವನ್ನು ಒಂದೊಂದಾಗಿ ಮಾರಾಟ ಮಾಡುತ್ತಿದ್ದಾರೆ. ಈ ಮೂಲಕ ಅವರ ಸ್ನೇಹಿತರಿಗೆ ಸಹಾಯ ಮಾಡುತ್ತಿದ್ದಾರೆ. ಈ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಮುಂದೊಂದು ದಿನ ಮೋದಿಯವರು ಈ ದೇಶವನ್ನೇ ಮಾರಿ ಬಿಡುತ್ತಾರೆಂದು ಕಿಡಿಕಾರಿದರು,

ಪಂಡಿತ್ ಜವಾಹರಲಾಲ್ ನೆಹರು ನಿರ್ಮಿಸಿದ ಸಾರ್ವಜನಿಕ ವಲಯದ ಕಾರ್ಖಾನೆಗಳನ್ನು ಮೋದಿ ಮುಗಿಸುತ್ತಿದ್ದಾರೆ. ಈ ದೇಶದ ಭವಿಷ್ಯದ ಪೀಳಿಗೆಗೆ ನಾವೇನನ್ನು ನೀಡುತ್ತಿದ್ದೇವೆ? ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಅನ್ನು ನಿಂದಿಸುವುದನ್ನು ಬಿಟ್ಟರೆ ಮೋದಿಯವರ ಬಳಿ ಯಾವುದಕ್ಕೂ ಉತ್ತವಿಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರ ಎಲ್ಲದರಲ್ಲೂ ಹಸ್ತಕ್ಷೇಪ ಮಾಡುತ್ತಿದೆ. ಎಲ್ಲೆಡೆ ತನ್ನ ಪ್ರಾಬಲ್ಯವನ್ನು ಸ್ಥಾಪಿಸುತ್ತಿದೆ. ಇಂದು, ಚುನಾವಣಾ ಸಂಸ್ಥೆಗಳು ಕೂಡ ಅವರ ನಿಯಂತ್ರಣದಲ್ಲಿವೆ. ಚುನಾವಣೆಗಳಲ್ಲಿ ಅಕ್ರಮ-ಹಗರಣಗಳು ನಡೆಯುತ್ತಿವೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಇವಿಎಂ ತ್ಯಜಿಸಿ ಬ್ಯಾಲೆಟ್ ಪೇಪರ್ ಗಳತ್ತ ಸಾಗುತ್ತಿದ್ದರೆ, ನಮ್ಮ ಸರ್ಕಾರ ಇವಿಎಂನ್ನು ಮುಂದುವರೆಸುತ್ತಿದೆ. ಇವಿಎಂಗಳು ಜಗತ್ತಿನಲ್ಲಿ ಎಲ್ಲಿಯೂ ಲಭ್ಯವಿಲ್ಲ. ಆದರೆ, ನಮ್ಮ ದೇಶದಲ್ಲಿದೆ. 140 ಕೋಟಿ ಜನರು ಪ್ರಜಾಪ್ರಭುತ್ವವನ್ನು ನಂಬುತ್ತಾರೆ... ಇದಲ್ಲದಿದ್ದರೂ ಮುಂದೊಂದು ದೀನ ಈ ದೇಶದ ಯುವಕರು ಎದ್ದು ನಿಂತು ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕೆನ್ನುವ ಕಾಲ ಬರಲಿದೆ ಎಂದು ತಿಳಿಸಿದರು.

ಅಮೆರಿಕಾ ಸುಂದ ವಿಚಾರ ಕುರಿತು ಮಾತನಾಡಿ, ಅಮೆರಿಕಾ ಭಾರತಕ್ಕೆ ಶೇ.26ರಷ್ಟು ಸುಂಕವನ್ನು ವಿಧಿಸಿದೆ. ಆದರೆ, ಸಂಸತ್ತಿನಲ್ಲಿ ಅದರ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಲಿಲ್ಲ. ಸುಂಕ ಹೆಚ್ಚಿದ ದಿನದ ಮಧ್ಯಾಹ್ನವೇ ನಾವು ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದೆವು. ಆದರೆ, ಚರ್ಚೆ ಅವಕಾಶ ನೀಡಲಿಲ್ಲ. ದೇಶದ ಆರ್ಥಿಕತೆಯಲ್ಲಿ ಏಕಸ್ವಾಮ್ಯವನ್ನು ಸ್ಥಾಪಿಸಲಾಗುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಕ್ಷುಲ್ಲಕ ವಿಷಯಗಳನ್ನು ಚರ್ಚೆಗೆ ತೆಗೆದುಕೊಳ್ಳುತ್ತಿದೆ. ನೈಜ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಎಂದು ಆರೋಪಿಸಿದರು.

ಸಂಸತ್ತಿನಲ್ಲಿ ಸಾರ್ವಜನಿಕ ವಿಷಯಗಳ ಬಗ್ಗೆ ಚರ್ಚಿಸುವ ಬದಲು ಬೆಳಗಿನ ಜಾವ 3-4 ಗಂಟೆಯವರೆಗೆ ಕೋಮು ವಿಚಾರಗಳ ಕುರಿತು ಚರ್ಚೆ ನಡೆಸಿತು. ಮಣಿಪುರದಂತಹ ವಿಚಾರ ಕುರಿತು ಬೆಳಗಿನ ಜಾವ 4:40 ಕ್ಕೆ ಚರ್ಚೆ ಪ್ರಾರಂಭವಾಯಿತು. ಅಮೆರಿಕಾ ಸುಂಕ ವಿಷಯದ ಬಗ್ಗೆ ಮಾತನಾಡಬೇಕಾಗಿರುವುದರಿಂದ ಮರುದಿನ ಮಣಿಪುರದ ಬಗ್ಗೆ ಚರ್ಚಿಸೋಣ ಎಂದು ಅಮಿತ್ ಶಾ ಅವರಿಗೆ ಹೇಳಿದೆ, ಆದರೆ, ಅದಕ್ಕೆ ಅವರು ಒಪ್ಪಲಿಲ್ಲ. ಜನರಿಂದ ಏನನ್ನು ಮುಚ್ಚಿಡಲು ಸರ್ಕಾರ ಯತ್ನಿಸುತ್ತಿದೆ? ತನ್ನ ವೈಫಲ್ಯಗಳನ್ನು ಮುಚ್ಚಿಡಲು ಪ್ರಯತ್ನಿಸುತ್ತಿರುವುದನ್ನು ಇದು ಬಹಿರಂಗಪಡಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com