ತಮಿಳು ನಾಡು ಬಿಜೆಪಿ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ನೇಮಕ: ಅಣ್ಣಾಮಲೈಗೆ ಶೀಘ್ರದಲ್ಲೇ ರಾಷ್ಟ್ರೀಯ ಹುದ್ದೆ ಸಾಧ್ಯತೆ

ಸೋಷಿಯಲ್ ಮೀಡಿಯಾ ಪೋಸ್ಟ್ ನಲ್ಲಿ, ಬಿಜೆಪಿ ಅಣ್ಣಾಮಲೈ ಅವರ ಸಂಘಟನಾ ಸಾಮರ್ಥ್ಯಗಳನ್ನು ರಾಷ್ಟ್ರಮಟ್ಟದಲ್ಲಿ ಬಳಸಿಕೊಳ್ಳಲು ಉದ್ದೇಶಿಸಿದೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಅವರು ತಮ್ಮ ಪೋಸ್ಟ್‌ನಲ್ಲಿ, ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ನಾಗೇಂದ್ರನ್ ಅವರಿಂದ ಮಾತ್ರ ನಾಮನಿರ್ದೇಶನವನ್ನು ಸ್ವೀಕರಿಸಿದೆ ಎಂದು ತಿಳಿಸಿದ್ದಾರೆ.
Union Home Minister Amit Shah along with BJP leader K Annamalai at a press meet held in Chennai on Friday.
ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನಾಯಕ ಕೆ ಅಣ್ಣಾಮಲೈ
Updated on

ನವದೆಹಲಿ: ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರಿಗೆ ಶೀಘ್ರದಲ್ಲೇ ಪಕ್ಷದಲ್ಲಿ ಪ್ರಮುಖ ರಾಷ್ಟ್ರೀಯ ಸಂಘಟನಾ ಪಾತ್ರ ಸಿಗುವುದು ಬಹುತೇಕ ಖಚಿತವಾಗಿದ್ದು, ತಮಿಳು ನಾಡಿಗೆ ಹೊಸ ಬಿಜೆಪಿ ಅಧ್ಯಕ್ಷರ ನೇಮಕವಾಗಿದೆ.

ನಿನ್ನೆ ಶುಕ್ರವಾರ ಚೆನ್ನೈನಲ್ಲಿ ಪಕ್ಷದ ಪ್ರಮುಖ ಚಾಣಾಕ್ಷ ಗೃಹ ಸಚಿವ ಅಮಿತ್ ಶಾ ಮತ್ತು ಹಿರಿಯ ಬಿಜೆಪಿ ನಾಯಕರ ನಡುವಿನ ಸಭೆಯ ನಂತರ ನೈನಾರ್ ನಾಗೇಂದ್ರನ್ ಅವರನ್ನು ತಮಿಳು ನಾಡಿನ ನೂತನ ಬಿಜೆಪಿ ಮುಖ್ಯಸ್ಥರನ್ನಾಗಿ ಅನುಮೋದಿಸಲಾಗಿದೆ ಎಂದು ದೃಢಪಡಿಸಲಾಗಿದೆ.

ಸೋಷಿಯಲ್ ಮೀಡಿಯಾ ಪೋಸ್ಟ್ ನಲ್ಲಿ, ಬಿಜೆಪಿ ಅಣ್ಣಾಮಲೈ ಅವರ ಸಂಘಟನಾ ಸಾಮರ್ಥ್ಯಗಳನ್ನು ರಾಷ್ಟ್ರಮಟ್ಟದಲ್ಲಿ ಬಳಸಿಕೊಳ್ಳಲು ಉದ್ದೇಶಿಸಿದೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಅವರು ತಮ್ಮ ಪೋಸ್ಟ್‌ನಲ್ಲಿ, ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ನಾಗೇಂದ್ರನ್ ಅವರಿಂದ ಮಾತ್ರ ನಾಮನಿರ್ದೇಶನವನ್ನು ಸ್ವೀಕರಿಸಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಅಣ್ಣಾಮಲೈ ಅವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ ಅವರು, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಣ್ಣಾಮಲೈ ಅವರು ಶ್ಲಾಘನೀಯ ಸಾಧನೆಗಳನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳನ್ನು ಜನರಿಗೆ ತಲುಪಿಸುವುದರಲ್ಲಿ, ಪಕ್ಷದ ಕಾರ್ಯಕ್ರಮಗಳನ್ನು ಹಳ್ಳಿಯಿಂದ ಹಳ್ಳಿಗೆ ತಲುಪಿಸುವುದರಲ್ಲಿ ಅಣ್ಣಾಮಲೈ ಅವರ ಕೊಡುಗೆ ಅಭೂತಪೂರ್ವವಾಗಿದೆ ಎಂದರು.

ಪಕ್ಷದ ರಾಷ್ಟ್ರೀಯ ಚೌಕಟ್ಟಿನಲ್ಲಿ ಅಣ್ಣಾಮಲೈ ಅವರ ಸಂಘಟನಾ ಕೌಶಲ್ಯವನ್ನು ಬಿಜೆಪಿ ಬಳಸಿಕೊಳ್ಳಲಿದೆ ಎಂದು ಹೇಳುವ ಮೂಲಕ ಅಮಿತ್ ಶಾ ಅವರು ಅಣ್ಣಾಮಲೈ ಅವರ ಭವಿಷ್ಯದ ಪಾತ್ರವನ್ನು ಮತ್ತಷ್ಟು ಸ್ಪಷ್ಟಪಡಿಸಿದರು. ಅಣ್ಣಾಮಲೈ ಅವರಿಗೆ ರಾಷ್ಟ್ರೀಯ ಮಟ್ಟದ ಹುದ್ದೆಯನ್ನು ಘೋಷಿಸುವ ಮೂಲಕ ಬಿಜೆಪಿ ಶೀಘ್ರದಲ್ಲೇ ಅಚ್ಚರಿ ಮೂಡಿಸಬಹುದು ಎಂದು ಮೂಲಗಳು ಸೂಚಿಸಿವೆ.

ಹೆಸರು ಬಹಿರಂಗಪಡಿಸಲು ಇಚ್ಛಿಸದ ಹಿರಿಯ ಬಿಜೆಪಿ ನಾಯಕರೊಬ್ಬರು, ತಮಿಳುನಾಡಿನಲ್ಲಿ ಅಣ್ಣಾಮಲೈ ಪ್ರದರ್ಶಿಸಿದ ಅದ್ಭುತ ಸಂಘಟನಾ ಕೌಶಲ್ಯವನ್ನು ನೋಡಿದ ನಂತರ ಅವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯ ಸಂಘಟನಾ ಜವಾಬ್ದಾರಿಯನ್ನು ವಹಿಸಲಾಗುವುದು ಅಥವಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಬಹುದು. ಚುನಾವಣೆಗೆ ಮುನ್ನ ದಕ್ಷಿಣ ಭಾರತದ ನಾಯಕರೊಬ್ಬರಿಗೆ ಪ್ರಮುಖ ಹುದ್ದೆ ನೀಡುವ ಬಗ್ಗೆಯೂ ಪಕ್ಷವು ಪರಿಗಣಿಸುತ್ತಿದೆ ಎಂದು ಹೇಳಿದರು.

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುವವರೆಗೆ ಅಣ್ಣಾಮಲೈ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಪ್ರತಿಭಟನೆಯ ಸಂಕೇತವಾಗಿ ಸಾರ್ವಜನಿಕವಾಗಿ ಬರಿಗಾಲಿನಲ್ಲಿ ನಡೆಯುವುದನ್ನು ಮುಂದುವರಿಸಿದ್ದಾರೆ.

ಹಿಂದುತ್ವ ಪರವಾದ ನಿಲುವು ಮತ್ತು ರಾಜ್ಯದಲ್ಲಿ ಹೆಚ್ಚುತ್ತಿರುವ ಜನಮನದಿಂದಾಗಿ ಅವರನ್ನು ಪಕ್ಷವು ಚೆನ್ನಾಗಿ ಗೌರವಿಸುತ್ತದೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಡಿಎಂಕೆ ಸರ್ಕಾರವನ್ನು ಪದಚ್ಯುತಗೊಳಿಸುವ ದೃಢ ಸಂಕಲ್ಪದೊಂದಿಗೆ ರಾಜಕೀಯ ಪ್ರವೇಶಿಸಿದರು.

ಮುಂದಿನ ಕೆಲವು ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು, ಬಹುಶಃ ಏಪ್ರಿಲ್ 16–17 ರೊಳಗೆ ಅಣ್ಣಾಮಲೈ ಬಗ್ಗೆ ಬಿಜೆಪಿ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಬಿಜೆಪಿ ಮೂಲವೊಂದು ಪತ್ರಿಕೆಗೆ ತಿಳಿಸಿದ್ದು, ಪ್ರಮುಖ ಸಾಂಸ್ಥಿಕ ಹುದ್ದೆ ಅವರಿಗಾಗಿ ಕಾಯುತ್ತಿದೆ ಎಂದು ಹೇಳಲಾಗುತ್ತಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಅಣ್ಣಾಮಲೈ ನಿರ್ಧರಿಸಿದೆ ಅವರನ್ನು ರಾಜ್ಯಸಭಾ ಸ್ಥಾನಕ್ಕೆ ಪರಿಗಣಿಸಬಹುದು ಎಂದು ಮೂಲಗಳು ತಿಳಿಸಿವೆ. ರಾಜ್ಯಸಭೆಗೆ ಆಯ್ಕೆಯಾದ ನಂತರ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬಹುದು ಎಂದು ಊಹಿಸಲಾಗಿದೆ,

ತಮಿಳುನಾಡಿನ 234 ಸದಸ್ಯರ ಶಾಸಕಾಂಗ ಸಭೆಗೆ 2026 ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com